ನನ್ನ ಪತ್ನಿ ಅವಾಂತರ ನೋಡಿ ಅಂತ ವಿಡಿಯೋ ಹರಿಬಿಟ್ಟ ಅಗ್ನಿಸಾಕ್ಷಿ ಸಹನಟ ರಾಜೇಶ್ ಧ್ರುವ
ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿ ಸಹ ನಟ ರಾಜೇಶ್ ಧ್ರುವ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರೆ ಇದಕ್ಕೆ ಪ್ರತಿಯಾಗಿ ನಟ ನನ್ನ ಪತ್ನಿ ಸರಿಯಿಲ್ಲ.

Published On :
ಬೆಂಗಳೂರು: ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿ ಸಹ ನಟ ರಾಜೇಶ್ ಧ್ರುವ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರೆ ಇದಕ್ಕೆ ಪ್ರತಿಯಾಗಿ ನಟ ನನ್ನ ಪತ್ನಿ ಸರಿಯಿಲ್ಲ. ಕುಡಿದು ಗಲಾಟೆ ಮಾಡುತ್ತಿದ್ದಳು ಅಂತ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ರಾಜೇಶ್ ತಮ್ಮ ಪತ್ನಿ ಶೃತಿ ಮದ್ಯಪಾನ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಶೃತಿ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದಾರೆ. ರಾಜೇಶ್ ಹಾಗೂ ಶೃತಿ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾಗ ಈ ವಿಡಿಯೋ ಚಿತ್ರೀಕರಿಸಲಾಗಿದೆ.
2017ರಲ್ಲಿ ಶ್ರುತಿಯವರನ್ನು ವಿವಾಹವಾಗಿದ್ದ ರಾಜೇಶ್ ಅವರಿಗೆ ವರದಕ್ಷಿಣೆ ತರುವಂತೆ ಪೀಡಿಸಿದ್ದಾರೆ. ಅಲ್ಲದೆ ಅವರಿಗೆ ಮಾನಸಿಕ ಹಿಂಸೆ ಕೊಟ್ಟು ಮನೆಯಿಂದ ಹೊರ ಹಾಕಿದ್ದಾರೆ ಅವರ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ರಾಜೇಶ್ ಪತ್ನಿ ಶ್ರುತಿ ಪತಿ ವಿರುದ್ಧ ಬಸವನಗುಡಿ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೋಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


