ಸಿನಿಮಾ ಸುದ್ದಿ

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ: ನಟಿ ವಿಜಯಲಕ್ಷ್ಮಿ ಕಣ್ಣೀರು!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ಸಹಾಯಹಸ್ತಕ್ಕಾಗಿ...

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ: ನಟಿ ವಿಜಯಲಕ್ಷ್ಮಿ ಕಣ್ಣೀರು!
ವಿಜಯಲಕ್ಷ್ಮಿ
Published On :
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ಸಹಾಯಹಸ್ತಕ್ಕಾಗಿ ಕಾದಿದ್ದರು. 
ಇದೀಗ ಆರೋಗ್ಯ ಸ್ವಲ್ಪ ಸುಧಾರಿಸಿದ್ದರಿಂದ ವಿಡಿಯೋ ಮಾಡಿದ್ದ ಅವರು ನಾನು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇಷ್ಟೊಂದು ನೋವು ಅನುಭವಿಸಲು ಅವರಿಬ್ಬರು ಬಿಡುತ್ತಿರಲಿಲ್ಲ. ಅವರಿಲ್ಲದೆ ನಾನು ಅನಾಥೆಯಾಗಿದ್ದೇನೆ ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಕನ್ನಡ ಚಿತ್ರರಂಗದಲ್ಲಿ ಸುದೀಪ್ ಸರ್ ಬಿಟ್ಟು ಬೇರೆ ಯಾರಿಗೂ ಯಾಕೆ ಕರುಣೆ ಬಂದಿಲ್ಲ. ನಾನು ಏನ್ ತಪ್ಪು ಮಾಡಿದ್ದೀನಿ. ಯಾಕೆ ಇಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ವಿಡಿಯೋದಲ್ಲಿ ತಮ್ಮ ನೋವಿನ ಮಾತುಗಳನ್ನು ಹಂಚಿಕೊಂಡಿದ್ದಾರೆ. 
ಸದ್ಯದ ಪರಿಸ್ಥಿತಿಯಲ್ಲಿ ನನ್ನ ಕೈಯಲ್ಲಿ ಕೆಲಸ ಮಾಡುಲು ಸಾಧ್ಯವಾಗುತ್ತಿಲ್ಲ. ನನಗೆ ಸ್ವಂತ ಮನೆಯಿಲ್ಲ. ಬಾಡಿಗೆ ಮನೆಗೆ ಹೋಗಬೇಕೆಂದರೆ ಅಡ್ವಾನ್ಸ್ ಕೊಡಬೇಕು. ಅಷ್ಟು ಹಣ ಕೊಡಲು ನನ್ನ ಬಳಿ ಸಾಧ್ಯವಿಲ್ಲ. ನನಗೆ ಸಹಾಯ ಮಾಡುವುದಾಗಿ ಹೇಳಿದ್ದ ಕೆಲವರು ನಂತರ ನನ್ನ ಫೋನ್ ಕಾಲ್ ರಿಸೀವ್ ಮಾಡುತ್ತಿಲ್ಲ. ಆದರೆ ಸುದೀಪ್ ಯಾರೂ ನನಗೆ ಸಹಾಯ ಮಾಡುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.