ಒಂದೆಡೆ ಐಟಿ ದಾಳಿ, ಇನ್ನೊಂದೆಡೆ 13 ದಿನಕ್ಕೆ 175 ಕೋಟಿ ಕ್ಲಬ್ ಸೇರಿ ದಾಖಲೆ ಬರೆದ ಕೆಜಿಎಫ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇನ್ನು ಬಿಡುಗಡೆಯಾದ ಆರನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ್ದ ಕೆಜಿಎಫ್ ಚಿತ್ರ...

Published On :
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇನ್ನು ಬಿಡುಗಡೆಯಾದ ಆರನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ್ದ ಕೆಜಿಎಫ್ ಚಿತ್ರ ಇದೀಗ 10ನೇ ದಿನಕ್ಕೆ 150 ಕೋಟಿ ಕ್ಲಬ್ ಸೇರಿ ದಾಖಲೆ ಬರೆದಿತ್ತು. ಇದೀಗ 13ನೇ ದಿನಕ್ಕೆ 175 ಕೋಟಿ ಕ್ಲಬ್ ಸೇರುವ ಮೂಲಕ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ.
ಹೌದು, ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರ 150 ಕೋಟಿ ಗಳಿಸುವ ಮೂಲಕ ಕನ್ನಡ ಚಿತ್ರವೊಂದು ಈ ಕ್ಲಬ್ ಸೇರಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ 175 ಕೋಟಿ ಗಳಿಸಿ ಮುನ್ನುಗ್ಗುತ್ತಿದೆ. ಇನ್ನು ಚಿತ್ರ ಬಿಡುಗಡೆಯಾಗಿ 13 ದಿನ ಕಳೆದರೂ ಇನ್ನು ಚಿತ್ರವನ್ನು ನೋಡಲು ಥಿಯೇಟರ್ ಗಳತ್ತ ಪ್ರೇಕ್ಷಕರು ದಾಂಗುಡಿ ಹಿಡುತ್ತಿರುವುದರಿಂದ ಚಿತ್ರದ ಕಲೆಕ್ಷನ್ ಸಹ ಜೋರಾಗಿದೆ.
ಕೆಜಿಎಫ್ ಚಿತ್ರ ಜಗತ್ತಿನಾದ್ಯಂತ ಒಟ್ಟಾರೆ 175 ಕೋಟಿ ರುಪಾಯಿ ಗಳಿಸಿದ್ದು ಇದರಲ್ಲಿ 138.5 ಕೋಟಿ ನೆಟ್ ಶೇರ್ ಆಗಿದೆ. ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ವಾರದ ಅಂತ್ಯಕ್ಕೆ 7.6 ಕೋಟಿ ರುಪಾಯಿ ಗಳಿಸಿದೆ.
ಇನ್ನು ಕನ್ನಡದಲ್ಲಿ ಒಟ್ಟಾರೆ 90 ಕೋಟಿಗೂ ಹೆಚ್ಚುಕಲೆಕ್ಷನ್ ಮಾಡಿದೆ. ಇದು ಕನ್ನಡದ ಮಟ್ಟಿಗೆ ಹೊಸ ದಾಖಲೆ. ಪುನೀತ್ ರಾಜಕುಮಾರ್ ಅಭಿನಯದ ರಾಜಕುಮಾರ ಚಿತ್ರ ಒಟ್ಟಾರೆ 75 ಕೋಟಿ ಗಳಿಸಿ ಮೊದಲ ಸ್ಥಾನದಲ್ಲಿತ್ತು. ಇದೀಗ ಈ ದಾಖಲೆಯನ್ನು ಕೆಜಿಎಫ್ ಮುರಿದಿದೆ.
ಇಲ್ಲಿಯವರೆಗೂ ಹಿಂದಿ ಆವೃತ್ತಿಯಲ್ಲಿ ಕೆಜಿಎಫ್ ಚಿತ್ರ ಒಟ್ಟಾರೆ 30.45 ಕೋಟಿ ರುಪಾಯಿ ಗಳಿಸಿರುವ ಕೆಜಿಎಫ್ ಹೊಸ ದಾಖಲೆ ನಿರ್ಮಿಸಿದೆ.
ಇನ್ನು ಗುರುವಾರ ಬೆಳಗ್ಗೆ ಐಟಿ ಅಧಿಕಾರಿಗಳು ಸ್ಯಾಂಡಲ್ವುಡ್ ನಟರು ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಇದರಲ್ಲಿ ಕೆಜಿಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಟ ಯಶ್ ಮನೆ ಮೇಲೂ ದಾಳಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


