ಯಶ್ ನೀವು ಕರೆದರೆ ಖಂಡಿತವಾಗಿಯೂ ಕನ್ನಡ ಚಿತ್ರದಲ್ಲಿ ನಟಿಸುತ್ತೇನೆಂದ ಬಾಲಿವುಡ್ ನಟಿ!
ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸು ಭಾರತೀಯ ಚಿತ್ರರಂಗ ಇದೀಗ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದೆ. ಇನ್ನು ಬಾಲಿವುಡ್ ನಟಿ ವಿದ್ಯಾಬಾಲನ್ ಸಹ ಯಶ್ ನೀವು ಅವಕಾಶ ನೀಡಿದರೆ....

Published On :
ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸು ಭಾರತೀಯ ಚಿತ್ರರಂಗ ಇದೀಗ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದೆ. ಇನ್ನು ಬಾಲಿವುಡ್ ನಟಿ ವಿದ್ಯಾಬಾಲನ್ ಸಹ ಯಶ್ ನೀವು ಅವಕಾಶ ನೀಡಿದರೆ ಖಂಡಿತವಾಗಿಯೂ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತೇನೆ ಎಂದು ಹೇಳಿದ್ದಾರೆ.
ಟಾಲಿವುಡ್ ನಟ ಬಾಲಕೃಷ್ಣ ಅಭಿನಯದ ಎನ್ಟಿಆರ್ ಕಥಾನಾಯಕುಡು ಚಿತ್ರದಲ್ಲಿ ಎನ್ಟಿಆರ್ ಪತ್ನಿ ಪಾತ್ರದಲ್ಲಿ ವಿದ್ಯಾಬಾಲನ್ ಅಭಿನಯಿಸಿದ್ದರು. ಇನ್ನು ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಟ ಬಾಲಕೃಷ್ಣ, ವಿದ್ಯಾಬಾಲನ್, ಯಶ್ ಹಾಗೂ ಪುನೀತ್ ರಾಜಕುಮಾರ್ ಭಾಗವಹಿಸಿದ್ದರು.

ಈ ವೇಳೆ ವಿದ್ಯಾಬಾಲನ್ ಕನ್ನಡ ಚಿತ್ರರಂಗಕ್ಕೆ ಕಾಲಿಡುವುಡು ಯಾವಾಗ ಎನ್ನುವ ಪ್ರಶ್ನೆ ಕೇಳಿ ಬಂದಿತ್ತು. ಅದಕ್ಕೆ ವಿದ್ಯಾಬಾಲನ್ ಯಶ್ ನೀವೂ ಅವಕಾಶ ನೀಡಿದರೆ ಖಂಡಿತವಾಗಿಯೂ ಕನ್ನಡಕ್ಕೆ ಕಾಲಿಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ವಿದ್ಯಾಬಾಲನ್ ದಿ ಡರ್ಟಿ ಪಿಕ್ಚರ್, ಕಹಾನಿ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


