ಸಿನಿಮಾ ಸುದ್ದಿ

ಗಣರಾಜ್ಯೋತ್ಸವದ ವಾರದಲ್ಲಿ ನಟಸಾರ್ವಭೌಮ ಟ್ರೈಲರ್ ಬಿಡುಗಡೆ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರವನ್ನು ಫೆಬ್ರವರಿ 7ಕ್ಕೆ ಬಿಡುಗಡೆ ಮಾಡಲು ನಿರ್ದೇಶಕರು ತೀರ್ಮಾನಿಸಿದ್ದು ಅದಕ್ಕೂ ಮುನ್ನ ಚಿತ್ರದ ಟ್ರೈಲರ್...

ಗಣರಾಜ್ಯೋತ್ಸವದ ವಾರದಲ್ಲಿ ನಟಸಾರ್ವಭೌಮ ಟ್ರೈಲರ್ ಬಿಡುಗಡೆ
ಪುನೀತ್ ರಾಜಕುಮಾರ್
Published On :
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರವನ್ನು ಫೆಬ್ರವರಿ 7ಕ್ಕೆ ಬಿಡುಗಡೆ ಮಾಡಲು ನಿರ್ದೇಶಕರು ತೀರ್ಮಾನಿಸಿದ್ದು ಅದಕ್ಕೂ ಮುನ್ನ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಚಿತ್ರದ ಕುರಿತಂತೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಲು ಮುಂದಾಗಿದೆ.
ಗಣರಾಜ್ಯೋತ್ಸವದ ವಾರದಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ನಿರ್ದೇಶಕ ಪವನ್ ಒಡೆಯರ್ ತೀರ್ಮಾನಿಸಿದ್ದಾರೆ. ಇನ್ನು ನಟಸಾರ್ವಭೌಮ ಚಿತ್ರ 2019ರಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. 
ಚಿತ್ರಕ್ಕೆ ರಾಕಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದು ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೈನ್ಸ್ ಪುನೀತ್ ರ ಕೈಯಲ್ಲಿ ಸಖತ್ ಆಗಿ ಫೈಟ್ ಮಾಡಿಸಿದ್ದಾರೆ. 
ಡಿ ಇಮಾಮ್ ಚಿತ್ರಕ್ಕೆ ಸಂಗೀತ ಕೊಟ್ಟಿದ್ದು ವೈಧಿ ಅವರ ಛಾಯಾಗ್ರಾಹಣವಿದೆ. ಪುನೀತ್ ಗೆ ಜೋಡಿಯಾಗಿ ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.