ಗಣರಾಜ್ಯೋತ್ಸವಕ್ಕೆ 'ಮದಗಜ'ದ 3ಡಿ ಮೋಶನ್ ಟೀಸರ್ ಬಿಡುಗಡೆ
ಸಂಕ್ರಾಂತಿ ದಿನ ಮದಗಜ ಚಿತ್ರದ ಸ್ಕ್ರಿಪ್ಟ್ ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಚಿತ್ರತಂಡ ಪೂಜೆ...

ಸಂಕ್ರಾಂತಿ ದಿನ ಮದಗಜ ಚಿತ್ರದ ಸ್ಕ್ರಿಪ್ಟ್ ಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಚಿತ್ರತಂಡ ಪೂಜೆ ಮಾಡಿಸಿಕೊಂಡು ಬಂದಿದೆ. ಇದೀಗ ಗಣರಾಜ್ಯೋತ್ಸವ ದಿನ 3ಡಿ ಮೋಷನ್ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿಶ್ಚಯಿಸಿದೆ.
ಶ್ರೀಮುರಳಿ ಅಭಿನಯಿಸುತ್ತಿರುವ ಚಿತ್ರಕ್ಕೆ ಉಮಾಪತಿ ಎಸ್ ಬಂಡವಾಳ ಹೂಡುತ್ತಿದ್ದಾರೆ. ಅಯೋಗ್ಯ ಸಿನಿಮಾದ ನಿರ್ದೇಶಕ ಮಹೇಶ್ ಕುಮಾರ್ ಈ ಚಿತ್ರವನ್ನು ಕೂಡ ನಿರ್ದೇಶಿಸುತ್ತಿದ್ದಾರೆ.
ಈ ಚಿತ್ರದಲ್ಲಿ ನಾಯಕ ಅನಿವಾಸಿ ಭಾರತೀಯನಾಗಿದ್ದು ಕೌಟುಂಬಿಕ ಭಾವನೆ ಮತ್ತು ಆಕ್ಷನ್ ಸನ್ನಿವೇಶಗಳನ್ನು ಒಳಗೊಂಡಿರುತ್ತದೆ. ಅರ್ಜುನ್ ಜನ್ಯ ಸಂಗೀತ, ಶ್ರೀಶ ಕುಡುವಳ್ಳಿ ಅವರ ಛಾಯಾಗ್ರಹಣವಿದೆ.
ಚೇತನ್ ಕುಮಾರ್ ಅವರ ಭರಾಟೆ ಮುಗಿದ ಮೇಲೆ ಮದಗಜ ಚಿತ್ರತಂಡವನ್ನು ಶ್ರೀಮುರಳಿ ಸೇರಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


