ಪುನೀತ್ ಅಭಿಮಾನಿಗಳ ಹುಚ್ಚೆಬ್ಬಿಸಿದ ನಟ ಸಾರ್ವಭೌಮ ಟ್ರೈಲರ್!
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ.

Published On :
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ.
ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ.
ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೇವಲ ಒಂದು ಗಂಟೆಯಲ್ಲೇ 284,387 ಅಧಿಕ ವೀಕ್ಷಣೆ ಕಂಡಿದೆ. ಚಿತ್ರಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೂಡಿಕೆ ಮಾಡಿದ್ದು, ಪವನ್ ಒಡೆಯರ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruPuneeth RajkumarSandalwoodಸ್ಯಾಂಡಲ್ ವುಡ್ಪುನೀತ್ ರಾಜ್ ಕುಮಾರ್ನಟ ಸಾರ್ವಭೌಮNata Saarvabhowma
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


