ತೆಲುಗಿನ ಸೂಪರ್ ಹಿಟ್ ಚಿತ್ರ ರಂಗಸ್ಥಳಂ ಕನ್ನಡ ಡಬ್ ಜುಲೈ 12ಕ್ಕೆ ರಿಲೀಸ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಆಗಿ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು.

Published On :
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಆಗಿ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು. ಈ ನಡುವೆ ತೆಲುಗು ಹಾಗೂ ತಮಿಳಿನ ಸೂಪರ್ ಹಿಟ್ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಬರುತ್ತಿದ್ದು ಇದಕ್ಕೆ ಮತ್ತೊಂದು ಸೇರ್ಪಡೆ ತೆಲುಗಿನ ರಂಗಸ್ಥಳಂ.
ತೆಲುಗಿನಲ್ಲಿ ಸೂಪರ್ ಹಿಟ್ ಆಗಿದ್ದ ರಾಮ್ ಚರಣ್ ಅಭಿನಯದ ರಂಗಸ್ಥಳಂ ಕನ್ನಡದ ಡಬ್ ಚಿತ್ರ ಜುಲೈ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ರಾಮ್ ಚರಣ್ ಮತ್ತು ಸಮಂತಾ ಅಕಿನೇನಿ ಅಭಿನಯಿಸಿದ್ದು 2018ರ ಮಾರ್ಚ್ 30ರಂದು ತೆಲುಗಿನಲ್ಲಿ ಬಿಡುಗಡೆಯಾಗಿತ್ತು.
ರಂಗಸ್ಥಳಂ ಚಿತ್ರವನ್ನು ಸುಕುಮಾರ್ ನಿರ್ದೇಶನ ಮಾಡಿದ್ದು ಕನ್ನಡ ನಿರ್ಮಾಪಕ ಜಾಕ್ ಮಂಜು ರಾಜ್ಯಾದ್ಯಂತ ವಿತರಣೆಯ ಹಕ್ಕು ಪಡೆದಿದ್ದಾರೆ. ಇನ್ನು ಜುಲೈ 12ರಂದು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಂಗಸ್ಥಳಂ ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
kannadaSandalwoodಕನ್ನಡRam Charanರಾಮ್ ಚರಣ್ಸ್ಯಾಂಡಲ್ವುಡ್Samantha AkkineniRangasthalamರಂಗಸ್ಥಳಂಸಮಂತಾ ಅಕಿನೇನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


