ಮೊಟ್ಟ ಮೊದಲ ಬಾರಿಗೆ ತೆರೆಯ ಮೇಲೆ ಅನಾವರಣಗೊಳ್ಳುತ್ತಿದೆ ಗೋಕಾಕ್ ಚಳವಳಿ!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ಟೀಸರ್ ಸೋಮವಾರ ರಿಲೀಸ್ ಆಗಿದೆ, ಮಂಗಳವಾರ ಗಣೇಶ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಟೀಸರ್ ...

Published On :
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ಟೀಸರ್ ಸೋಮವಾರ ರಿಲೀಸ್ ಆಗಿದೆ, ಮಂಗಳವಾರ ಗಣೇಶ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ.
ವಿಜಯ್ ನಾಗೇಂದ್ರ ನಿರ್ದೇಶನದ ಗೀತಾ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಗೋಕಾಕ್ ಹೋರಾಟವನ್ನು ತೆರೆಯ ಮೇಲೆ ತರಲಾಗಿದೆ
ನಾಗೇಂದ್ರ ಚೊಚ್ಚಲ ಬಾರಿಗೆ ‘ಗೀತಾ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಗಣೇಶ್ ಅವರು ದಿಟ್ಟ ಕನ್ನಡಪರ ಹೋರಾಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಕುರಿತು ಜಾಗೃತಿ ಮೂಡಿಸಿದಂತಹ ಒಂದು ದೊಡ್ಡ ಹೋರಾಟ ಗೋಕಾಕ್ ಚಳವಳಿ. ಅದರ ಹಿನ್ನೆಲೆಯಲ್ಲಿ ನಡೆಯುವಂತಹ ಕಥೆ ಈ ಸಿನಿಮಾದಲ್ಲಿದೆ’ ಎಂದು ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಸಾಹಿತಿಗಳು ಲೇಖಕರು ಬರಹಗಾರರು ಸರ್ಕಾರವನ್ನು ಒತ್ತಾಯಿಸಿದ್ದರು, ಆದರೆ ಸರ್ಕಾರ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ, ಇದೇ ವೇಳೆ ಕನ್ನಡದ ಹಿರಿಯ ನಟ ಡಾ.ರಾಜ್ ಕುಮಾರ್ ಕೂಡ ಗೋಕಾಕ್ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದರು. ಆ ನಂತರ ಸರ್ಕಾರ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡಿತ್ತು ಎಂದು ನಾಗೇಂದ್ರ ತಿಳಿಸಿದ್ದಾರೆ.
ಗೀತಾ ಸಿನಿಮಾ ಕೇವಲ ಲವ್ ಸ್ಟೋರಿಯಲ್ಲ, ಕನ್ನಡ ಭಾಷೆಯ ಮೇಲಿನ ಪ್ರೀತಿಯ ಬಗ್ಗೆ ಕಥೆ ಇದಾಗಿದೆ, ಗಣೇಶ್ ಅವರ ಗೋಲ್ಡನ್ ಮೂವೀಸ್ ಮತ್ತು ಸೈಯದ್ ಸಲಾಂ ಅವರ ಎಸ್ಎಸ್ ಫಿಲಂಸ್ ಜಂಟಿಯಾಗಿ ಈ ಸಿನಿಮಾವನ್ನು
ನಿರ್ಮಾಣ ಮಾಡಿವೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಅನೂಪ್ ರುಬೆನ್ಸ್ ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ ‘ಖುಷಿ ಖುಷಿಯಾಗಿ’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡಿದ್ದರು..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


