ಬಿಡುಗಡೆಗೆ ಮುನ್ನವೇ ಹೊಸ ದಾಖಲೆ ಬರೆದ ಪೈಲ್ವಾನ್: ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ಕಿಚ್ಚನ ಕುಸ್ತಿ!
ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಆಗಸ್ಟ್ ತಿಂಗಳಲ್ಲಿ ಕನ್ನಡ, ತೆಲುಗು, ತಮಿಳು ಸೇರಿದಂತೆ ಈ ಚಿತ್ರ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ....

Published On :
ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಆಗಸ್ಟ್ ತಿಂಗಳಲ್ಲಿ ಕನ್ನಡ, ತೆಲುಗು, ತಮಿಳು ಸೇರಿದಂತೆ ಈ ಚಿತ್ರ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಪೈಲ್ವಾನ್ ಚಿತ್ರ ವಿಶ್ವದಾದ್ಯಂತ 2500 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಆಗಸ್ಟ್ 8, 2019ರಂದು ಥೀಯಟರ್‌ನಲ್ಲಿ ಬಿಡುಗಡೆ ಕಾಣಲಿರುವ ಪೈಲ್ವಾನ್, ಭಾರೀ ನಿರೀಕ್ಷೆ ಮೂಡಿಸಿದೆ.
ಬಿಗ್ ಬಜೆಟ್ ಹಾಗೂ ರಿಚ್ ಮೇಕಿಂಗ್ ಮೂಲಕ ಈಗಾಗಲೇ ಸಾಕಷ್ಟು ಗಮನಸೆಳೆದಿರುವ ಪೈಲ್ವಾನ್ ಚಿತ್ರವು ಇದೀಗ 2500 ತೆರೆಗಳಲ್ಲಿ ಮಿಂಚಲು ಸಜ್ಜಾಗಿದೆ.
ಕಿಚ್ಚ ಸುದೀಪ್ ನಾಯಕತ್ವದ ಪೈಲ್ವಾನ್ ಚಿತ್ರವನ್ನು ಕೃಷ್ಣ ಅವರು ನಿರ್ಮಿಸಿ ನಿರ್ದೇಶನವನ್ನು ಸಹ ಮಾಡುತ್ತಿದ್ದಾರೆ.
ಪೈಲ್ವಾನ್ ಚಿತ್ರದ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದೆ. ಸದ್ಯಕ್ಕೆ ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ತಮಿಳು, ತೆಲುಗು ಮತ್ತು ಹಿಂದಿ ಡಿಸ್ಟ್ರಿಬ್ಯೂಷನ್ ರೈಟ್ಸ್ ಗಳ ಮಾತುಕತೆ ಫೈನಲ್ ಆಗುತ್ತಿದೆ.
ಸುದೀಪ್ ಗೆ ನಾಯಕಿಯಾಗಿ ಆಕಾಂಕ್ಷಾ ಸಿಂಗ್ ನಟಿಸಿದ್ದಾರೆ, ಬಾಲಿವುಡ್ ನಟ ಸುನೀಲ್ ಶೆಟ್ಟಿ ಪ್ರಪ್ರಥಮ ಬಾರಿಗೆ ಕನ್ನಡದಲ್ಲಿ ನಟಿಸುತ್ತಿದ್ದಾರೆ, ಸುಶಾಂತ್ ಸಿಂಗ್, ಕಬೀರ್ ಸಿಂಗ್ ಮುಂತಾದವರು ಅಭಿನಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


