ಕೋಟಿಗೊಬ್ಬ-3 ಚಿತ್ರೀಕರಣ ಪ್ರಾರಂಭಿಸಿದ ಪೈಲ್ವಾನ್!
ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಪ್ರಮೋಷನ್ ನಲ್ಲಿ ಭಾಗಿಯಾಗಿರುವ ನಟ ಸುದೀಪ್ ಈಗ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

Published On :
ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಪ್ರಮೋಷನ್ ನಲ್ಲಿ ಭಾಗಿಯಾಗಿರುವ ನಟ ಸುದೀಪ್ ಈಗ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಹೈದರಾಬಾದ್ ನಲ್ಲಿ ಸೋಮವಾರದಿಂದ ಚಿತ್ರೀಕರಣ ನಡೆಯುತ್ತಿದ್ದು, ರಾಮೂಜಿ ಫಿಲ್ಮ್ ಸಿಟಿಯಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೆಟ್ ಹಾಕಲಾಗಿದೆ.
ಈ ಸಿನಿಮಾ ಶಿವ ಕಾರ್ತಿಕ್ ನ ಮೊದಲ ಸಿನಿಮಾ ಆಗಿದ್ದು, ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿರುವ ಮಡೋನಾ ಸೆಬಾಸ್ಟಿಯನ್, ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಶ್ರದ್ಧಾ ದಾಸ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
15 ದಿನಗಳ ಕಾಲ ಚಿತ್ರೀಕರಣ ನಿಗದಿಯಾಗಿದ್ದು, ನಂತರ ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.
ಕೋಟಿಗೊಬ್ಬ-2 ಚಿತ್ರಕ್ಕೆ ನಿರ್ಮಾಪಕರಾಗಿದ್ದ ಸೂರಪ್ಪ ಬಾಬು ಹಾಗೂ ಸುದೀಪ್ ಈ ಚಿತ್ರದಲ್ಲೂ ಜೊತೆಗೂಡಿದ್ದು, ಕೋಟಿಗೊಬ್ಬ-3 ಚಿತ್ರಕ್ಕೆ ಸುದೀಪ್ ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಶೇಖರ್ ಚಂದ್ರು ಛಾಯಾಗ್ರಹಣ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


