ಸಿಲಿಕಾನ್ ಸಿಟಿ ರಸ್ತೆ ದುರವಸ್ಥೆ: ಅಧಿಕಾರಿಗಳೇ ಎದ್ದೇಳಿ ಎಂದ ಪ್ರಿಯಾ ಸುದೀಪ್
ಸಿಲಿಕಾನ್ ಸಿಟಿ ಬೆಂಗಳುರಿನ ರಸ್ತೆಗಳು ಅದೆಷ್ಟು ಹದಗೆಟ್ಟಿದೆ ಎಂದರೆ ಕೆರೆಯಂತಾಗಿರುವ ಕೆಲ ರಸ್ತೆಗಳು ದ್ವಿಚಕ್ರ ವಾಹನ ಸವಾರರ ಪಾಲಿಗೆ ಯಮದೂತರಂತೆ ಆಗಿದೆ

Published On :
ಸಿಲಿಕಾನ್ ಸಿಟಿ ಬೆಂಗಳುರಿನ ರಸ್ತೆಗಳು ಅದೆಷ್ಟು ಹದಗೆಟ್ಟಿದೆ ಎಂದರೆ ಕೆರೆಯಂತಾಗಿರುವ ಕೆಲ ರಸ್ತೆಗಳು ದ್ವಿಚಕ್ರ ವಾಹನ ಸವಾರರ ಪಾಲಿಗೆ ಯಮದೂತರಂತೆ ಆಗಿದೆ
ಈ ಬಗೆಗೆ ಸಾರ್ವಜನಿಕರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಹಳೆ ಸುದ್ದಿ ಇದೀಗ ಸ್ಯಾಂಡಲ್ ವುಡ್ ಚಿತ್ರಪ್ರೇಮಿಗಳ ಪಾಲಿನ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ತಾವು ಸಹ ರಸ್ತೆ ಸುರಕ್ಷತೆ ಬಗೆಗೆ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದೆ #SaveBellandur ಪೇಜಿನಲ್ಲಿ ಹಾಳಾಗಿರುವ ರಸ್ತೆ ಫೋಟೋಗಳನ್ನು ಅಪ್ ಮಾಡಲಾಗಿದ್ದು ಪ್ರಿಯಾ ಅವರು ಅದೇ ಫೋಟೋ ರಿಟ್ವಿಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
"ನಾನು ಸಹ ಇದೇ ಮಾರ್ಗದಲ್ಲಿ ಸಂಚರಿಸುವವಳು, ಇಲ್ಲಿನ ಸ್ಥಳೀಯ ಜನರ ಆಕ್ರೋಶ ನನಗೆ ಅರ್ಥವಾಗುತ್ತದೆ. ಆದರೆ ಅಧಿಕಾರಿಗಳಿಗೆ ತಮ್ಮ ಕರ್ತವ್ಯದ ಅರಿವಿಲ್ಲ. ಇನ್ನಾದರೂ ತಕ್ಷಣ ಈ ಬಗ್ಗೆ ಕ್ರಮ ತೆಗೆದುಕೊಳ್ಳಿ" ಪ್ರಿಯಾ ಸುದೀಪ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


