ಜೂನ್ ಅಂತ್ಯಕ್ಕೆ ಶಿವಣ್ಣನ 'ರುಸ್ತುಂ' ತೆರೆಗೆ, ಡೇಟ್ ಗೊತ್ತಾ?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕನಾಗಿರುವ "ರುಸ್ತುಂ" ಹಾಗೂ ಉಪೇಂದ್ರ ಅಭಿನಯದ "ಐ ಲವ್ ಯು" ಚಿತ್ರಗಳು ಜೂನ್ 14ರಂದು ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ....

Published On :
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕನಾಗಿರುವ "ರುಸ್ತುಂ" ಹಾಗೂ ಉಪೇಂದ್ರ ಅಭಿನಯದ "ಐ ಲವ್ ಯು" ಚಿತ್ರಗಳು ಜೂನ್ 14ರಂದು ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಲಭಿಸಿದ ಮಾಹಿತಿಯಂತೆ ಎರಡು ಚಿತ್ರಗಳ ಬಿಡುಗಡೆ ದಿನಾಂಕಗಲಲ್ಲಿ ಹದಿನೈದು ದಿನಗಳ ಅಂತರವಿರಲಿದೆ.
"ಐ ಲವ್ ಯು" ಚಿತ್ರ ಇದಕ್ಕೆ ಮುನ್ನ ಹೇಳಿರುವಂತೆ ಜೂನ್ 14ಕ್ಕೆ ತೆರೆ ಕಂಡರೆ "ರುಸ್ತುಂ" ಜೂನ್ 28ಕ್ಕೆ ಬಿಡುಗಡೆಯಾಗಲಿದೆ.
ಚಿತ್ರದ ಗ್ರಾಫಿಕ್ ಕೆಲಸಕ್ಕೆ ಹೆಚ್ಚು ಸಮಯ ಬೇಕಾಗುವ ಕಾರಣ ಚಿತ್ರ ಬಿಡುಗಡೆ ವಿಳಂಬವಾಗಲಿದೆ ಎಂದು ಚಿತ್ರತಂಡ ಹೇಳಿದೆ. ಅಲ್ಲದೆ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ತೋರಿಸಲಾಗಿದ್ದು ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ.ಹಾಗಾಗಿ ನಿರ್ಮಾಪಕರಾದ ಜಯಣ್ಣ ಚಿತ್ರವನ್ನು ಜೂನ್ ಅಂತ್ಯದ ವೇಳೆಗೆ ಬಿಡುಗಡೆಗೊಳಿಸಲು ತೀರ್ಮಾನಿಸಿದ್ದಾರೆ.
ಶಿವಣ್ಣ ನಾಯಕನಾಗಿರುವ ಈ ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಸಹ ಅಭಿನಯಿಸಿದ್ದಾರೆ. ಶ್ರದ್ದಾ ಶ್ರೀನಾಥ್ ನಾಯಕಿಯಾಗಿರುವ ಚಿತ್ರದಲ್ಲಿ ಮಯೂರಿ, ರಚಿತಾ ರಾಮ್ ಸಹ ಕಾಣಿಸಿಕೊಳ್ಳುತ್ತಿದ್ದಾರೆ.ಅನೂಪ್ ಸೀಳನ್ ಸಂಗೀತ, ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


