ಸಿನಿಮಾ ಸುದ್ದಿ

ಆಗಸ್ಟ್ ತಿಂಗಳಿಂದ 'ಗಂಡುಗಲಿ ಮದಕರಿ ನಾಯಕ' ಶೂಟಿಂಗ್ ಆರಂಭ

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಗಂಡುಗಲಿ ಮದಕರಿ ನಾಯಕ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿದ್ದಾರೆ, ಆಗಸ್ಟ್ ತಿಂಗಳಿನಲ್ಲಿ ಸಿನಿಮಾ ಶೂಟಿಂಗ್ ...

ಆಗಸ್ಟ್ ತಿಂಗಳಿಂದ 'ಗಂಡುಗಲಿ ಮದಕರಿ ನಾಯಕ' ಶೂಟಿಂಗ್ ಆರಂಭ
ಗಂಡುಗಲಿ ಮದಕರಿ ನಾಯಕ ಸಿನಿಮಾ ಪೋಸ್ಟರ್
Published On :
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಗಂಡುಗಲಿ ಮದಕರಿ ನಾಯಕ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿದ್ದಾರೆ, ಆಗಸ್ಟ್ ತಿಂಗಳಿನಲ್ಲಿ  ಸಿನಿಮಾ ಶೂಟಿಂಗ್ ಆರಂಭಿಸಲು ನಿರ್ಧರಿಸಲಾಗಿದೆ, 
ಐತಿಹಾಸಿಕ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ, ಐತಿಹಾಸಿಕ ಸಿನಿಮಾಗಾಗಿ ಹೆಚ್ಚಿನ ಸಮಯ ಬೇಕಾಗುತ್ತದೆ ಅದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಸದ್ಯ ಗ್ರಾಫಿಕ್ಸ್ ವಿನ್ಯಾಸ ಮಾಡಲಾಗುತ್ತಿದೆ.
ಐತಿಹಾಸಿಕ ಸಿನಿಮಾಗಾಗಿ ವಸ್ತ್ರ ವಿನ್ಯಾಸಕ್ಕಾಗಿ ಹೆಚ್ಚಿನ ಸಮಯ ಹಿಡಿಯುತ್ತಿದೆ. ಎಲ್ಲಾ ವಿಭಾಗಗಳಲ್ಲೂ ಕೆಲಸ ನಡೆಯುತ್ತಿದೆ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಈ ಹಿಂದೆ ಸಂದರ್ಶನವೊಂದರಲ್ಲಿ ಗಂಡುಗಲಿ ಮದಕರಿ ನಾಯಕ  ಸಿನಿಮಾ ಕನ್ನಡ ಸಿನಿಮಾ ಇತಿಹಾಸದಲ್ಲಿ ಲ್ಯಾಂಡ್ ಮಾರ್ಕ್ ಆಗಲಿದೆ ಎಂದು ರಾಕ್ ಲೈನ್ ಹೇಳಿದ್ದರು. 
ಸಿನಿಮಾಗೆ ಹಂಸಲೇಖಾ ಸಂಗೀತ ನೀಡುತ್ತಿದ್ದಾರೆ.ಐತಿಹಾಸಿಕ ಸಿನಿಮಾವನ್ನು ಚಿತ್ರದುರ್ಗ, ಮುಂಬಯಿ, ಹೈದರಾಬಾದ್ ಹಾಗೂ ರಾಜಸ್ತಾನಗಳಲ್ಲಿ ಶೂಟಿಂಗ್ ನಡೆಯಲಿದೆ, 
ದರ್ಶನ್ ನಟನೆಯ ಮುನಿರತ್ನ ಕುರುಕ್ಷೇತ್ರ ಆಗಸ್ಟ್ 9 ರಂದು ಸಿನಿಮಾ ರಿಲೀಸ್ ಆಗಲಿದೆ, ಸದ್ಯ ದರ್ಶನ್ ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.