'ರೇಮೊ' ಮೂಲಕ ಮತ್ತೆ ಸ್ಯಾಂಡಲ್‌ವುಡ್‌ಗೆ ಇಶಾನ್ ರೀ-ಎಂಟ್ರಿ!
ಪುರಿ ಜಗನಾಥ್ ನಿರ್ದೇಶನದ ರೋಗ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದ ನಟ ಇಶಾನ್ ಇದೀಗ ಎರಡು ವರ್ಷಗಳ ಬಳಿಕ ರೇಮೊ ಚಿತ್ರದ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Published On :
ಪುರಿ ಜಗನಾಥ್ ನಿರ್ದೇಶನದ ರೋಗ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದ ನಟ ಇಶಾನ್ ಇದೀಗ ಎರಡು ವರ್ಷಗಳ ಬಳಿಕ ರೇಮೊ ಚಿತ್ರದ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ರೇಮೊ ಚಿತ್ರದ ಮುಹೂರ್ತ ಕಾರ್ಯಕ್ರಮ ಅದಾಗಲೇ ನಡೆದಿದ್ದು ಮುಂದಿನ ದಿನಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇನ್ನು ಚಿತ್ರಕ್ಕೆ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಸಿಆರ್ ಮನೋಹರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇಶಾನ್ ಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಈ ಚಿತ್ರ ಲವ್ ಸ್ಟೋರಿ ಜೊತೆಗೆ ಪಕ್ಕಾ ಕಮರ್ಷಿಯಲ್ ಸಿನಿಮಾ ಆಗಿದೆಯಂತೆ.
ಸಿಆರ್ ಮನೋಹರ್ ಚೊಚ್ಚಲ ನಿರ್ಮಾಣದ ಒರಟಾ ಐ ಲವ್ ಯೂ ಚಿತ್ರದಲ್ಲಿ ಇಶಾನ್ ಮೊದಲ ಬಾರಿಗೆ ಕ್ಯಾಮೆರಾ ಫೇಸ್ ಮಾಡಿದ್ದರಂತೆ ನಂತರ ಈ ದೃಶ್ಯಗಳನ್ನು ಡಿಲೀಟ್ ಮಾಡಲಾಗಿತ್ತು ಎಂದು ಇಶಾನ್ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


