ಸಿನಿಮಾ ಸುದ್ದಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅದ್ಯಕ್ಷರಾಗಿ ಜೈರಾಜ್ ಆಯ್ಕೆ!

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿಆರ್ ಅವಿರೋಧ ಆಯ್ಕೆಯಾಗಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅದ್ಯಕ್ಷರಾಗಿ ಜೈರಾಜ್ ಆಯ್ಕೆ!
ಸಂಗ್ರಹ ಚಿತ್ರ
Published On :
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿಆರ್ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಉಮೇಶ್ ಬಣಕಾರ್, ವಿತರಕ ವಲಯದಿಂದ ನಾಗರಾಜ್ ಬಿ.ಎಲ್.(ನಾಗಣ್ಣ) ಮತ್ತು ಪ್ರದರ್ಶಕ ವಲಯದಿಂದ ವೆಂಕಟರಮಣ(ಬಾಜ್ಜಿ) ಆಯ್ಕೆಯಾಗಿದ್ದು, ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಸುರೇಶ್ ಎನ್ಎಂ, ವಿತರಕ ವಲಯದಿಂದ ಗಣೇಶ್ ಎ ಮತ್ತು ಪ್ರದರ್ಶಕ ವಲಯದಿಂದ ನರಸಿಂಹಲು ಎಂ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ವೆಂಕಟೇಶ್ ಕೆ.ವಿ. ಆಯ್ಕೆಯಾಗಿದ್ದಾರೆ.
ಈ ಬಾರಿ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ‌‌‌ ಮೀಸಲಾಗಿತ್ತು. ಮಂಗಳವಾರ ಮಂಡಳಿಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಗುಬ್ಬಿಯ ಶ್ರೀಚನ್ನಬಸವೇಶ್ವರ ಟಾಕೀಸ್ ಮಾಲೀಕರಾದ ಜೈರಾಜ್ ಅವರನ್ನು ಹೊರತುಪಡಿಸಿದರೆ ಯಾರೊಬ್ಬರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಭಾನುವಾರ ಬೆಳಿಗ್ಗೆ 11ಗಂಟೆಗೆ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.