ರಾಜ್ ಬಿ ಶೆಟ್ಟಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ಇಬ್ಬರು ಹೀರೋಗಳು
ಒಂದು ಮೊಟ್ಟೆಯ ಕಥೆ ' ಚೊಚ್ಚಲ ಚಿತ್ರ ನಿರ್ದೇಶನ ಹಾಗೂ ನಟನಾ ಕೌಶಲ್ಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದ ರಾಜ್ ಬಿ ಶೆಟ್ಟಿ ಇದೀಗ 'ಹರಿಹರ ಎಂಬ ಶೀರ್ಷಿಕೆಯನ್ನಿಟ್ಟುಕೊಂಡು ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬೆಂಗಳೂರು:'ಒಂದು ಮೊಟ್ಟೆಯ ಕಥೆ ' ಚೊಚ್ಚಲ ಚಿತ್ರ ನಿರ್ದೇಶನ ಹಾಗೂ ನಟನಾ ಕೌಶಲ್ಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದ ರಾಜ್ ಬಿ ಶೆಟ್ಟಿ ಇದೀಗ 'ಹರಿಹರ ಎಂಬ ಶೀರ್ಷಿಕೆಯನ್ನಿಟ್ಟುಕೊಂಡು ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಸಿಟಿ ಎಕ್ಸ್ ಪ್ರೆಸ್ ಗೆ ಈ ವಿಷಯ ತಿಳಿಸಿರುವ ರಾಜ್, ಈ ಚಿತ್ರದಲ್ಲಿ ಇಬ್ಬರು ಹಿರೋಗಳು ಇರಲಿದ್ದಾರೆ. ತಾನೇ ಹಿರೋ ಆಗಿದ್ದು, ಮತ್ತೊಬ್ಬರನ್ನು ಸದ್ಯದಲ್ಲಿಯೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಪ್ರಸ್ತುತ ಗಾಂಧಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಕಥೆ ಸಿದ್ದವಾಗಿದೆ. ಮೇ ಮಧ್ಯಭಾಗದಿಂದ ಚಿತ್ರೀಕರಣ ಆರಂಭಿಸಲಾಗುವುದು. ಮತ್ತೊಬ್ಬ ಹೀರೋವನ್ನು ಅಂತಿಮಗೊಳಿಸಿದ ನಂತರ ನನ್ನ ಭಾಗವನ್ನು ಆರಂಭಿಸುತ್ತೇನೆ. ಈಗ ಲೋಕೇಷನ್ ಅಂತಿಮಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


