ಚಿಕ್ಕಮಗಳೂರು: ನಟ ಸುದೀಪ್ ವಿರುದ್ಧ ಅರೆಸ್ಟ್ ವಾರೆಂಟ್
ದೀಪಕ್ ಮಯೂರ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್...

Published On :
ಬೆಂಗಳೂರು: ದೀಪಕ್ ಮಯೂರ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್ ನೀಡಿದೆ.
ವಾರಸ್ದಾರ ಎಂಬ ಧಾರಾವಾಹಿ ಚಿತ್ರೀಕರಣದ ಬಾಡಿಗೆ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ವಾರಸ್ದಾರ ಧಾರಾವಾಹಿಗೆ ಮನೆ ಪಡೆದು ಬಾಡಿಗೆ ನೀಡದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ. ದೀಪಕ್ ಮಯೂರ್ ಎಂಬುವವರು ನೀಡಿದ ದೂರಿನ ಸಂಬಂಧ ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಸಮನ್ಸ್ ನೀಡಲಾಗಿದೆ.
ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ದೀಪಕ್ ಮಯೂರ್ ಎನ್ನುವವರು ಮನೆ, ತೋಟ ಬಾಡಿಗೆ ನೀಡಿದ್ದರು. ಧಾರಾವಾಹಿ ಶೂಟಿಂಗ್ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದ್ದು, ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದೆ. ಈ ಹಣವನ್ನು ನೀಡಬೇಕೆಂದು ಧಾರಾವಾಹಿ ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


