ಬೆಂಗಳೂರು: 'ರಣಂ' ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ; ಮಹಿಳೆ, ಮಗು ಸಾವು
ಚಿರಂಜೀವಿ ಸರ್ಜಾ ಅಭಿನಯದ ರಣಂ ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Published On :
ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ರಣಂ ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಬಾಗಲೂರಿನ ಶೆಲ್ ಕಂಪನಿ ಬಳಿ ರೋಡ್ ಬ್ಲಾಕ್ ಮಾಡಿ ಚಿತ್ರದ ಫೈಟ್ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಬಾಗಲೂರಿನಿಂದ ಸೂಲಿಬೆಲೆಗೆ ತೆರಳುತ್ತಿದ್ದ 28 ವರ್ಷದ ಸುಬೇನಾ ಹಾಗೂ 8 ವರ್ಷದ ಅಹೀರಾ ಇಬ್ಬರು ರಸ್ತೆ ಬದಿ ನಿಂತು ಶೂಟಿಂಗ್ ನೋಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಫೋಟದ ತೀವ್ರತೆಗೆ ಮಹಿಳೆ ಮತ್ತು ಮಗುವಿನ ದೇಹಗಳು ಛಿದ್ರಛಿದ್ರವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


