ದರ್ಶನ್ ಅಭಿನಯದ 'ರಾಬರ್ಟ್' ಸೆಟ್ ನಲ್ಲಿ ಮೊಬೈಲ್ ಬ್ಯಾನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಬರ್ಟ್ ಚಿತ್ರದಲ್ಲಿ ಬ್ಯುಸಿಯಾಗಲಿದ್ದು ಇನ್ನು ಚಿತ್ರೀಕರಣದ ಸಂದರ್ಭದಲ್ಲಿ ಮೊಬೈಲ್ ಬ್ಯಾನ್ ಮಾಡಲಾಗುವುದು ಎಂದು ನಿರ್ದೇಶಕ ತರುಣ್ ಸುಧೀರ್ ತಿಳಿಸಿದ್ದಾರೆ.

Published On :
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರಾಬರ್ಟ್ ಚಿತ್ರದಲ್ಲಿ ಬ್ಯುಸಿಯಾಗಲಿದ್ದು ಇನ್ನು ಚಿತ್ರೀಕರಣದ ಸಂದರ್ಭದಲ್ಲಿ ಮೊಬೈಲ್ ಬ್ಯಾನ್ ಮಾಡಲಾಗುವುದು ಎಂದು ನಿರ್ದೇಶಕ ತರುಣ್ ಸುಧೀರ್ ತಿಳಿಸಿದ್ದಾರೆ.
ಚೌಕ ಚಿತ್ರದ ಮೂಲಕ ತರುಣ್ ಸುಧೀರ್ ನಿರ್ದೇಶಕನಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ರಾಬರ್ಟ್ ಶೀರ್ಷಿಕೆಯಡಿ ದರ್ಶನ್ ಅವರಿಗೆ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಚೌಕ ಚಿತ್ರದಲ್ಲಿ ದರ್ಶನ್ ರಾಬರ್ಟ್ ಹೆಸರಿನ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಇದೇ ಹೆಸರು ಚಿತ್ರದ ಶೀರ್ಷಿಕೆಯಾಗಿದೆ.
ಚೌಕದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದ ದರ್ಶನ್ ಅವರಿಗೆ ಇದೀಗ ತರುಣ್ ಪೂರ್ಣ ಪ್ರಮಾಣದ ಚಿತ್ರ ನಿರ್ದೇಶಿಸುತ್ತಿದ್ದಾರೆ. ಇಂದು ಚಿತ್ರದ ಮುಹೂರ್ತ ನಡೆಯಲಿದ್ದು ನಾಳೆಯಿಂದ ಚಿತ್ರದ ಚಿತ್ರೀಕರಣ ಆರಂಭಗೊಳ್ಳಲಿದೆ. ಇನ್ನು ವಿಶೇಷತೆ ಏನೆಂದರೆ ಚಿತ್ರೀಕರಣದ ಸಂದರ್ಭದಲ್ಲಿ ಮೊಬೈಲ್ ಬ್ಯಾನ್ ಮಾಡಲಾಗಿದೆ. ಈ ಕಠಿಣ ಕ್ರಮವನ್ನು ತರುಣ್ ಸುಧೀರ್ ತೆಗೆದುಕೊಂಡಿದ್ದಾರೆ.
ಹೀಗೆ ಮಾಡುವುದರಿಂದ ಕಲಾವಿದರು, ತಂತ್ರಜ್ಞರು ಎಲ್ಲರೂ ಶಿಸ್ತಿನಿಂದ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂಬುದು ನಿರ್ದೇಶಕರ ಆಶಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


