ಬೆಂಗಳೂರು 69 ಶೂಟಿಂಗ್ ಮುಗಿಸಿದ ಅನಿತಾ ಭಟ್
ಸ್ಯಾಂಡಲ್‌ವುಡ್‌ನಲ್ಲಿ ತನ್ನ ಬೋಲ್ಡ್ ಮತ್ತು ಗ್ಲಾಮರಸ್ ಲುಕ್‌ನಿಂದ ಗಮನ ಸೆಳೆದಿರುವ ನಟಿ ಅನಿತಾ ಭಟ್ ಸದ್ಯ ಬೆಂಗಳೂರು-69 ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ತನ್ನ ಬೋಲ್ಡ್ ಮತ್ತು ಗ್ಲಾಮರಸ್ ಲುಕ್‌ನಿಂದ ಗಮನ ಸೆಳೆದಿರುವ ನಟಿ ಅನಿತಾ ಭಟ್ ಸದ್ಯ ಬೆಂಗಳೂರು-69 ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.
ಇದೊಂದು ಸಸ್ಪೆನ್ಸ್, ಸೋಶಿಯಲ್ ಥ್ರಿಲ್ಲರ್ ಸಿನಿಮಾ.ಇಬ್ಬರು ಹುಡುಗರು ಸೇರಿ ಒಬ್ಬ ಶ್ರೀಮಂತ ಹುಡುಗಿಯನ್ನು ಕಿಡ್ನಾಪ್ ಮಾಡುತ್ತಾರೆ. ಯಾಕೆ ಆ ಕಿಡ್ನಾಪ್ ಮಾಡುತ್ತಾರೆ. ಹೇಗೆ ಮಾಡುತ್ತಾರೆ ಎಂಬುದೇ ಸಿನಿಮಾ ಕಥೆಯಾಗಿದೆ.
ಆಮೇಲೆ ಏನಾಗುತ್ತದೆ ಅನ್ನೋದು ಚಿತ್ರದ ಒನ್‌ಲೈನ್ ಸ್ಟೋರಿ. ಚಿತ್ರದ ಬಹುತೇಕ ಭಾಗ ಮೂರು ಪ್ರಮುಖ ಪಾತ್ರಗಳ ಸುತ್ತ ನಡೆಯುತ್ತದೆ’ ಎನ್ನುತ್ತಾರೆ. ಇನ್ನು “ಬೆಂಗಳೂರು-69′ ಚಿತ್ರದಲ್ಲಿ ಒಂದು ರೊಮ್ಯಾಂಟಿಕ್ ಹಾಡಿದ್ದು, ಆ ಹಾಡಿನಲ್ಲಿ ಅನಿತಾ ಬೋಲ್ಡ್ ಆ್ಯಂಗ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ನನ್ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇದೆ. ಚಿತ್ರವ ಮತ್ತು ನನ್ನ ಪಾತ್ರ ಎರಡೂ ಚೆನ್ನಾಗಿ ಮೂಡಿಬಂದಿದೆ’ ಎಂದು ವಿವರಣೆ ಕೊಡುತ್ತಾರೆ ಅನಿತಾ ಭಟ್. ಸದ್ಯ “ಬೆಂಗಳೂರು-69′ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಈ ವರ್ಷದ ಕೊನೆಗೆ ಅಥವಾ ಜನವರಿಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಇದೆಲ್ಲದರ ನಡುವೆ ಅನಿತಾ ಭಟ್, “ಕಲಿವೀರ’, “ಸದ್ಗುಣ ಸಂಪನ್ನ ಮಾಧವ’ ಮತ್ತು “ಕನ್ನೇರಿ’ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಆ ಚಿತ್ರಗಳು ಕೂಡ ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


