ರಾಜಕುಮಾರ ನಂತರ ಇಶಾನ್ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ ತಮಿಳಿನ ಶರತ್ ಕುಮಾರ್!
ಸಾರಥಿ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ತಮಿಳಿನ ಶರತ್ ಕುಮಾರ್ ಅವರು ಇದೀಗ ಸ್ಯಾಂಡಲ್ವುಡ್ ನಲ್ಲಿ ಬೇಡಿಕೆ ನಟರಾಗಿದ್ದಾರೆ.

ಸಾರಥಿ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ತಮಿಳಿನ ಶರತ್ ಕುಮಾರ್ ಅವರು ಇದೀಗ ಸ್ಯಾಂಡಲ್ವುಡ್ ನಲ್ಲಿ ಬೇಡಿಕೆ ನಟರಾಗಿದ್ದಾರೆ.
ಪುನೀತ್ ರಾಜಕುಮಾರ್ ಅಭಿನಯದ ಬಾಕ್ಲ ಬಸ್ಟರ್ ರಾಜಕುಮಾರ ಚಿತ್ರದಲ್ಲಿ ಪುನೀತ್ ಗೆ ತಂದೆ ಪಾತ್ರದಲ್ಲಿ ನಟಿಸಿ ಶರತ್ ಕುಮಾರ್ ಸೈ ಎನಿಸಿಕೊಂಡಿದ್ದರು. ಇದಗೀ ಅದೇ ರೀತಿಯ ಪಾತ್ರದಲ್ಲಿ ಶರತ್ ಕುಮಾರ್ ನಟಿಸಲಿದ್ದಾರೆ.
ಶ್ರೀ ದೇಶಪಾಂಡೆ ಕರ್ನಾಟಕದ ಶ್ರೀಮಂತ ವ್ಯಕ್ತಿ ಪಾತ್ರದಲ್ಲಿ ಶರತ್ ಕುಮಾರ್ ಇಶನ್ ತಂದೆ ಪಾತ್ರದಲ್ಲಿ ರೆಮೋ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್, ರೊಮ್ಯಾಂಟಿಕ್ ಡ್ರಾಮಾ ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.
ಇಶನ್ ಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಬೆಂಗಳೂರು, ಹೈದರಾಬಾದ್, ಶಿರಸಿ ಮತ್ತು ಯಲ್ಲಾಪುರದಲ್ಲಿ ಸದ್ಯ ಶೂಟಿಂಗ್ ನಡೆಯುತ್ತಿದ್ದು ನಂತರ ಚಿತ್ರದ ಹಾಡುಗಳ ಚಿತ್ರೀಕರಣ ಸಿಂಗಾಪುರ, ಥಾಯ್ಲೆಂಡ್, ಮಲೇಷಿಯಾ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


