ಅನೂಪ್ ಭಂಡಾರಿ ನಿರ್ದೇಶನದಲ್ಲಿ 'ಫ್ಯಾಂಟಮ್' ಆಗಲಿದ್ದಾರೆ 'ಪೈಲ್ವಾನ್'
ಅನೂಪ್ ಭಂಡಾರಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಸುದೀಪ್ ನಟಿಸಲಿದ್ದಾರೆ, ಸಿನಿಮಾಗೆ 'ಫ್ಯಾಂಟಮ್' ಎಂಬು ಶೀರ್ಷಿಕೆ ಇಡಲಾಗಿದೆ.

ಅನೂಪ್ ಭಂಡಾರಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಸುದೀಪ್ ನಟಿಸಲಿದ್ದಾರೆ, ಸಿನಿಮಾಗೆ 'ಫ್ಯಾಂಟಮ್' ಎಂಬು ಶೀರ್ಷಿಕೆ ಇಡಲಾಗಿದೆ.
ಕಿಚ್ಚ ಸುದೀಪ್ ಅಭಿನಯದ “ಪೈಲ್ವಾನ್’ ಚಿತ್ರ ಪ್ರದರ್ಶನ ಕಾಣುತ್ತಿದೆ. ಇನ್ನೊಂದು ಕಡೆ “ಕೋಟಿಗೊಬ್ಬ-3′ ಚಿತ್ರೀಕರಣದಲ್ಲಿದ್ದು, ಡಿಸೆಂಬರ್ ಹೊತ್ತಿಗೆ ಚಿತ್ರೀಕರಣ ಮುಗಿಯಲಿದೆ.
ಡಿಸೆಂಬರ್ ನಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಚಿತ್ರ. “ರಂಗಿತರಂಗ’ ಅನೂಪ್ ಭಂಡಾರಿ ನಿರ್ದೇಶನದ ಹೊಸ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಈ ಹಿಂದೆ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಶನ್‌ನಲ್ಲಿ “ಬಿಲ್ಲಾ ರಂಗ ಬಾಷಾ’ ಚಿತ್ರ ಅನೌನ್ಸ್ ಆಗಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರ ಕೆಲಕಾಲ ಮುಂದಕ್ಕೆ ಹೋಗಿದ್ದು, “ಬಿಲ್ಲಾ ರಂಗ ಬಾಷಾ’ ಚಿತ್ರದ ಬದಲಾಗಿ ಸುದೀಪ್ ಮತ್ತು ಅನೂಪ್ ಕಾಂಬಿನೇಶನ್‌ನಲ್ಲಿ ಹೊಸ ಚಿತ್ರವೊಂದು ಶುರುವಾಗಲಿದ್ದು, ಡಿಸೆಂಬರ್‌ನಲ್ಲಿ ಈ ಚಿತ್ರ ಸೆಟ್ಟೇರಲಿದೆ.
ಚಿತ್ರವನ್ನು ಜಾಕ್ ಮಂಜು ನಿರ್ಮಿಸಲಿದ್ದಾರೆ. ಮೂಲಗಳ ಪ್ರಕಾರ ಸದ್ಯ ಈ ಚಿತ್ರಕ್ಕೆ 'ಫ್ಯಾಂಟಮ್'’ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.
ಚಿರಂಜೀವಿ ಅಭಿನಯದ ಸೈ ರಾ ನರಸಿಂಹ ರೆಡ್ಡಿ ಸಿನಿಮಾದಲ್ಲೂ ಸುದೀಪ್ ನಟಿಸಿದ್ದು, ಅಕ್ಟೋಬರ್ 2 ರಂದು ರಿಲೀಸ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


