ಎಂಗೇಜ್ ಮೆಂಟ್ ಅಲ್ಲ, ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ: ಚಂದನ್ ಶೆಟ್ಟಿ
ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಬೆಂಗಳೂರು: ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಸರ್ಕಾರಿ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿಶ್ಚಿತಾರ್ಥಕ್ಕೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಯುವ ದಸರಾ ಉಪ ಸಮಿತಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ದಸರಾ ಮೇಲುಸ್ತುವಾರಿ ಸಚಿವ ವಿ. ಸೋಮಣ್ಣ, ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಾಡ ಅಧಿದೇವತೆ ಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ದೇವಿ ಶಿಕ್ಷೆ ನೀಡುತ್ತಾಳೆ ಎಂದು ಕಿಡಿಕಾರಿದ್ದರು.
ಇದಕ್ಕೆ ದಸರಾ ಉಪ ಸಮಿತಿ ಕಾರಣವಲ್ಲ, ಈ ಸಂಬಂಧ ಯುವ ದಸರಾ ಉಪ ಸಮಿತಿಯ ಕಾರ್ಯಾಧ್ಯಕ್ಷರು ಆಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೋಮಣ್ಣ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ಖಾಸಗಿ ಚಾನೆಲ್ ವೊಂದರಲ್ಲಿ ಮಾತನಾಡಿರುವ ಚಂದನ್ ಶೆಟ್ಟಿ, ಇದು ಎಂಗೇಜ್ ಮೆಂಟ್ ಅಲ್ಲ. ನನ್ನ ನಿರ್ಧಾರವಾಗಿತ್ತು. ಮನೋ ರಂಜನೆ ಮಾಡಬೇಕೆಂಬ ಉದ್ದೇಶದಿಂದ ಆ ರೀತಿಯಾಗಿ ವರ್ತಿಸಿದ್ದೇನೆ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ, ತಮ್ಮಿಂದ ತಪ್ಪಾಗಿದ್ದರೆ ಸರ್ಕಾರದ ಬಳಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


