ಸಿನಿಮಾ ಸುದ್ದಿ

ಯುವದಸರಾದಲ್ಲಿ ಪ್ರೇಮ ನಿವೇದನೆ: ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ದೂರು ದಾಖಲು

ಯುವದಸಾರಾ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಬೇಬಿ ಡಾಲ್ ನಿವೇದಿತಾಗೆ ಪ್ರೇಮ ನಿವೇದನೆ ಮಾಡಿದ್ದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ವಿರುದ್ಧ ಮೈಸೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವದಸರಾದಲ್ಲಿ ಪ್ರೇಮ ನಿವೇದನೆ: ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ದೂರು ದಾಖಲು
ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ದೂರು ದಾಖಲು
Published On :

ಮೈಸೂರು: ಯುವದಸಾರಾ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಬೇಬಿ ಡಾಲ್ ನಿವೇದಿತಾಗೆ ಪ್ರೇಮ ನಿವೇದನೆ ಮಾಡಿದ್ದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ವಿರುದ್ಧ ಮೈಸೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ದೂರು ಸಲ್ಲಿಸಿದ್ದಾರೆ..

ವೈಯುಕ್ತಿಕ ಕೆಲಸಕ್ಕಾಗಿ ಸರ್ಕಾರಿ ವೇದಿಕೆ ಬಳಸಿದ್ದು ತಪ್ಪು, ಆಹ್ವಾನವಿಲ್ಲದೆಯೂ ನಿವೇದಿತಾ ಅವರಿಗೆ ವೇದಿಕೆ ಮೇಲೆ ಅವಕಾಶ ನಿಡಲಾಗಿದೆ.ಇದು ಭದ್ರತಾ ಲೋಪವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಕಾನ್ ಹೇಳಿಕೆ ನೀಡಿದ್ದು ಸರ್ಕಾರಿ ಕಾರ್ಯಕ್ರಮವನ್ನು ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಇನ್ನು ಯೂತ್ ಕಾಂಗ್ರೆಸ್ ಮಾತ್ರವಲ್ಲದೆ ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರಿಂದಲೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ದೂರು ದಾಖಲಾಗಿವೆ.

Story image

ಈ ಸಂಬಂಧ ಪ್ರತಿಕ್ರಯಿಸಿರು ಸಚಿವ ವಿ. ಸೋಮಣ್ಣ  ಚಂದನ್ ಶೆಟ್ಟಿ ಮತ್ತು ನಿವೇದಿತಾ ವೇದಿಉಕೆಯಲ್ಲಿ ನಡೆದುಕೊಂಡ ರೀತಿ ಅಕ್ಷಮ್ಯ ಅಪರಾಧ. ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತುಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷ, ಮೈಸೂರು ಜಿಲ್ಲಾ ಅಧೀಕ್ಷಕರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Story image

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.