ಮತ್ತೆ ಬಣ್ಣ ಹಚ್ಚಲಿರುವ ಶ್ವೇತಾ ಶ್ರೀವಾತ್ಸವ್ : ಪೊಲೀಸ್ ಪಾತ್ರದಲ್ಲಿ ಕಮ್ ಬ್ಯಾಕ್
ಸುಮಾರು ಮೂರು ವರ್ಷಗಳಿಂದ ನಟನೆಯಿಂದ ದೂರು ಉಳಿದಿದ್ದ ಸ್ಯಾಂಡಲ್ ವುಡ್ ನಟಿ ಶ್ವೇತಾ ಶ್ರೀವಾತ್ಸವ್ ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳಲು ಸಜ್ಜಾಗಿದ್ದಾರೆ.

ಬೆಂಗಳೂರು: ಸುಮಾರು ಮೂರು ವರ್ಷಗಳಿಂದ ನಟನೆಯಿಂದ ದೂರು ಉಳಿದಿದ್ದ ಸ್ಯಾಂಡಲ್ ವುಡ್ ನಟಿ ಶ್ವೇತಾ ಶ್ರೀವಾತ್ಸವ್ ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳಲು ಸಜ್ಜಾಗಿದ್ದಾರೆ.
ಸುನ್ನಿಯ ಸಿಂಪಾಲ್ ಆಗಿ ಒಂದು ಲವ್ ಸ್ಟೋರಿ ಚಿತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಶ್ವೇತಾ ಶ್ರೀವಾತ್ಸವ್ , ಸುಮನಾ ಕಿತ್ತೂರು ನಿರ್ದೇಶನದ ಕಿರಗೂರಿನ ಗಯ್ಯಾಳಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.
ಕುತೂಹಲಕರಿ ವಿಷಯ ಅಂದ್ರೆ, ಶ್ವೇತಾ ಶ್ರೀವಾತ್ಸವ್ ಮುಂದಿನ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾಗೆ ‘ರಹದಾರಿ’ ಎಂಬ ಟೈಟಲ್ ಫಿಕ್ಸ್ ಮಾಡಲಾಗಿದೆ. ನಿರ್ದೇಶಕ ಗಿರೀಶ್ ವೈರಮುಡಿ ಆಕ್ಷನ್-ಕಟ್ ಹೇಳುತ್ತಿದ್ದು, ಮಂಜುನಾಥ ಶಾಮನೂರು ಮತ್ತು ಬಸವರಾಜು ಅವರು ನಿರ್ಮಾಣ ಮಾಡುತ್ತಿದ್ದಾರೆ. ರೋಣದ ಬಕ್ಕೇಶ್ ಮತ್ತು ಕೆ.ಸಿ.ರಾವ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ” ಎಂದು ಸಿನಿಮಾದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಖಾಕಿ ಸಮವಸ್ತ್ರದ ಬಗ್ಗೆ ಮಾತನಾಡಿರುವ ಶ್ವೇತಾ, ಸಾಮಾನ್ಯವಾಗಿ ಪೊಲೀಸ್ ಪಾತ್ರದಲ್ಲಿ ಪುರುಷರೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ, ಈ ಚಿತ್ರದಲ್ಲಿ ಮೊದಲ ಬಾರಿಗೆ ಖಾಕಿ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಿಂಸೆಗೆ ಹೆಚ್ಚಿನ ಪ್ರಾದಾನ್ಯತೆ ನೀಡದೆ ಕನ್ನಡ ನೆಟಿವಿಟಿಗೆ ತಕ್ಕಂತೆ ಚಿತ್ರ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ ಮೊದಲ ವಾರದಲ್ಲಿ ಚಿತ್ರದ ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ ತಿಂಗಳಿನಿಂದ ಚಿತ್ರೀಕರಣ ಸಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


