ಶ್ರುತಿ ಹರಿಹರನ್ ಪುತ್ರಿಗೆ ನಾಮಕರಣ: ಮಗಳು ಜಾನಕಿ ಫೋಟೊ ಪೋಸ್ಟ್ ಮಾಡಿದ ರಾಮ್
ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಮಲಯಾಳಂ ಮೂಲದ ನಟಿ ಶ್ರುತಿ ಹರಿಹರನ್ ಪುತ್ರಿಯ ನಾಮಕರಣ ಮಹೋತ್ಸವ ಇತ್ತೀಚೆಗೆ ನೆರವೇರಿದ್ದು, ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಫೋಟಿ ಹಂಚಿಕೊಂಡಿದ್ದಾರೆ.
ಶ್ರುತಿ ತಮ್ಮ ಮಗಳ ನಾಮಕರಣವನ್ನು ಸಾಂಪ್ರದಾಯಿಕವಾಗಿ ಕುಟುಂಬಸ್ಥರ ಜೊತೆ ಮಾಡಿದ್ದಾರೆ. ರಾಮ್ ಈ ಕಾರ್ಯಕ್ರಮದಲ್ಲಿ ತಮ್ಮ ಮಗಳನ್ನು ಎತ್ತಿಕೊಂಡು ಶ್ರುತಿ ಹಾಗೂ ಕುಟುಂಬಸ್ಥರ ಜೊತೆ ಕುಳಿತಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ನಾವು ಅತ್ಯುತ್ತಮ ಉಡುಗೊರೆಯೊಂದನ್ನು ಸ್ವೀಕರಿಸಿ ೨೮ ದಿನಗಳು ಕಳೆದಿವೆ ಮತ್ತು ಅದು ಕುಟುಂಬದ ಪ್ರೀತಿ ಪಾತ್ರರ ಜೊತೆ ಸಂಭ್ರಮಾಚರಣೆಗೆ ಕರೆ ನೀಡುತ್ತದೆ ಅಲ್ಲವೇ? ಎಂದು ಬರೆದುಕೊಂಡಿದ್ದಾರೆ.
ಸೋಮವಾರ ನಾಮಕರಣ ಕಾರ್ಯಕ್ರಮ ನಡೆದಿದ್ದು, ಶ್ರುತಿ ಹಾಗೂ ರಾಮ್ ತಮ್ಮ ಮಗಳಿಗೆ ‘ಜಾನಕಿ’ ಎಂದು ಹೆಸರಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ಸಾಂಪ್ರದಾಯಿಕವಾಗಿ ಈ ಕಾರ್ಯಕ್ರಮ ನಡೆದಿದೆ.
ಶ್ರುತಿ ಈವರೆಗೂ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿಲ್ಲ. ಆದರೆ ಈಗ ರಾಮ್ ಪೋಸ್ಟ್ ಮಾಡಿದ ಫೋಟೋದಲ್ಲೂ ಮಗುವಿನ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಅಭಿಮಾನಿಗಳು ಮಗಳ ಫೋಟೋ ರಿವೀಲ್ ಮಾಡಿ ಎಂದು ಶ್ರುತಿ ಬಳಿ ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


