ಸಿನಿಮಾ ಸುದ್ದಿ

ಕಾರು ನಿಲ್ಲಿಸಿ ವಯಸ್ಸಾದ ವ್ಯಕ್ತಿಗೆ ಹಣ ನೀಡಿದ ಸ್ಯಾಂಡಲ್‌ವುಡ್‌ ಖ್ಯಾತ ನಟ!

ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕಾರು ನಿಲ್ಲಿಸಿ ವಯಸ್ಸಾದ ವ್ಯಕ್ತಿಗೆ ಹಣ ನೀಡಿದ ಸ್ಯಾಂಡಲ್‌ವುಡ್‌ ಖ್ಯಾತ ನಟ!
ಶಿವರಾಜ್ ಕುಮಾರ್
Published On :

ಬೆಂಗಳೂರು: ರಣ ಬಿಸಿಲಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ವಯಸ್ಸಾದ ವ್ಯಕ್ತಿಯೊಬ್ಬರಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ನಟರೊಬ್ಬರು ಹಣ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. 

ನಾಗವಾರದ ಬಳಿ ಶಿವರಾಜ್ ಕುಮಾರ್ ಹೋಗುತ್ತಿದ್ದಾಗ ಬಿಸಿಲಲ್ಲಿ ನಿಂತಿದ್ದ ವೃದ್ಧರೊಬ್ಬರನ್ನು ನೋಡಿದ್ದಾರೆ. ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ಜೇಬಿನಲ್ಲಿದ್ದ ಹಣವನ್ನು ತೆಗೆದು ವೃದ್ಧನಿಗೆ ನೀಡಿದ್ದಾರೆ.

Story image

ಇದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು.

Story image

ಈ ಫೋಟೋವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ಈ ಫೋಟೋಗಳು ವೈರಲ್ ಆಗಿದೆ. ಇದನ್ನು ನೋಡಿದ ಶಿವಣ್ಣ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.