ನಟ ದರ್ಶನ್ ಜೊತೆ ಮನಸ್ತಾಪ ಆಗಿರೋದು ನಿಜ, ಆದರೆ..: ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮ್ಯಾನೇಜರ್ ಶ್ರೀನಿವಾಸ್ ರನ್ನು ಕೆಲಸದಿಂದ ವಜಾ ಮಾಡಿರುವ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೇ ವಿಚಾರವಾಗಿ ಸ್ವತಃ ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮ್ಯಾನೇಜರ್ ಶ್ರೀನಿವಾಸ್ ರನ್ನು ಕೆಲಸದಿಂದ ವಜಾ ಮಾಡಿರುವ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೇ ವಿಚಾರವಾಗಿ ಸ್ವತಃ ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳಲ್ಲಿ ಈ ಸುದ್ದಿ ವ್ಯಾಪಕ ಸುದ್ದಿಯಾದ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಈ ಕುರಿತಂತೆ ಸ್ಪಷ್ಟನೆ ನೀಡಿರುವ ಶ್ರೀನಿವಾಸ್, 'ದರ್ಶನ್ ಹಾಗೂ ನನ್ನ ನಡುವೆ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರುವುದು ನಿಜ ಎಂದು ಹೇಳಿದ್ದಾರೆ.
'ದರ್ಶನ್ ತೂಗುದೀಪ ಅಭಿಮಾನಿಗಳು ಮತ್ತು ಎಲ್ಲಾ ಮೀಡಿಯಾ ಸಂಸ್ಥೆಗಳಿಗೂ ನನ್ನ ನಮಸ್ಕಾರಗಳು. ನನಗೂ ಮತ್ತು ದರ್ಶನ್ ತೂಗುದೀಪ ಅವರಿಗೂ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರೋದು ನಿಜ. ಹೀಗಾಗಿ ನಾನು ಕಳೆದ ಸೆಪ್ಟೆಂಬರ್ 18 ರಿಂದ ದರ್ಶನ್ ಬಳಿ ಕೆಲಸ ಬಿಟ್ಟಿದ್ದೇನೆ. ನನ್ನ ಮೇಲೆ ಯಾರೂ ಸಹ ಇಲ್ಲ ಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ. ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಿಲ್ಲ. ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


