ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆಜಿಎಫ್ 2' ಚಿತ್ರೀಕರಣ ಹೈದರಾಬಾದ್ ಗೆ ಶಿಫ್ಟ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ದೇಶಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು. ಇನ್ನು ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು ಎರಡನೇ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದರಾಬಾದ್ಗೆ ಶಿಫ್ಟ್ ಆಗಲಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಕೆಜಿಎಫ್ 2' ಚಿತ್ರೀಕರಣ ಹೈದರಾಬಾದ್ ಗೆ ಶಿಫ್ಟ್!
ಸಂಜಯ್ ದತ್-ಯಶ್
Published On :

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ದೇಶಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು. ಇನ್ನು ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು ಎರಡನೇ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದರಾಬಾದ್ಗೆ ಶಿಫ್ಟ್ ಆಗಲಿದೆ.

ಕರ್ನಾಟಕ ಕೋಲಾರದ ಚಿನ್ನದ ಗಣಿಯಲ್ಲಿ ಪ್ರಮುಖ ಭಾಗಗಳ ಚಿತ್ರೀಕರಣ ಮುಕ್ತಾಯಗೊಂಡಿದ್ದು ಮುಂದಿನ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದರಾಬಾದ್ ಗೆ ತೆರಳಿದೆ.

ಕೆಜಿಎಫ್ 2 ಚಿತ್ರದ ಪ್ರಮುಖ ಪಾತ್ರಧಾರಿ ಅಧೀರಾನ ಪಾತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ನಟಿಸುತ್ತಿದ್ದಾರೆ. ಇದರ ಜೊತೆಗೆ ರವೀನಾ ಟಂಡನ್ ಸಹ ಚಿತ್ರದಲ್ಲಿ ನಟಿಸಲಿದ್ದಾರೆ. 

ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಪಂಚ ಭಾಷೆಗಳಲ್ಲಿ 2020ರಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. 

ಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದು ವಿಜಯ್ ಕಿರಗಂದೂರ್ ನಿರ್ಮಾಣ ಮಾಡುತ್ತಿದ್ದಾರೆ. ಭುವನ್ ಗೌಡ ಅವರ ಛಾಯಾಗ್ರಾಹಣವಿದ್ದು ರವಿ ಬಸ್ರೂರು ಸಂಗೀತ ಸಂಯೋಜಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.