ರಮೇಶ್ ಅರವಿಂದ್ ಜನ್ಮದಿನಕ್ಕೆ 101ನೇ ಚಿತ್ರ “ಶಿವಾಜಿ ಸುರತ್ಕಲ್” ಟೀಸರ್ ಉಡುಗೊರೆ
ಜನಪ್ರಿಯ ನಟ ರಮೇಶ್ ಅರವಿಂದ್ ಅವರ 101 ನೇ ಚಿತ್ರ "ಶಿವಾಜಿ ಸುರತ್ಕಲ್" ದ ಕೇಸ್ ಆಫ್ ರಣಗಿರಿ ರಹಸ್ಯ ಟೀಸರ್ ಅನ್ನು ಅವರ ಜನ್ಮದಿನದಂದು ಉಡುಗೊರೆಯ ರೂಪದಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.

ಬೆಂಗಳೂರು: ಜನಪ್ರಿಯ ನಟ ರಮೇಶ್ ಅರವಿಂದ್ ಅವರ 101 ನೇ ಚಿತ್ರ "ಶಿವಾಜಿ ಸುರತ್ಕಲ್" ದ ಕೇಸ್ ಆಫ್ ರಣಗಿರಿ ರಹಸ್ಯ ಟೀಸರ್ ಅನ್ನು ಅವರ ಜನ್ಮದಿನದಂದು ಉಡುಗೊರೆಯ ರೂಪದಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.
ಸೆಪ್ಟಂಬರ್ 10ರಂದು ರಮೇಶ್ ಅರವಿಂದ್ ಹುಟ್ಟುಹಬ್ಬ ವಿದ್ದು ಅಂದೇ “ಶಿವಾಜಿ ಸುರತ್ಕಲ್” ಟೀಸರ್ ಬಿಡುಗಡೆಗೊಳಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.
ಚಿತ್ರದ ಚಿತ್ರೀಕರಣ ಪೂರ್ಣವಾಗಿ ಮುಗಿದಿದ್ದು, ಡಬ್ಬಿಂಗ್ ಭಾಗ ಕೊನೆಯ ಹಂತದಲ್ಲಿದೆ. ರಾಧಿಕಾ ನಾರಾಯಣ್ ಹಾಗೂ ಆರೋಹಿ ನಾರಾಯಣ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಆಕಾಶ್ ಶ್ರೀವತ್ಸ ನಿರ್ದೇಶನವಿದೆ ರೇಖಾ ಕೆ. ಎನ್ ಹಾಗೂ ಅನೂಪ್ ಗೌಡ ಬಂಡವಾಳ ಹೂಡಿದ್ದಾರೆ.
ಅಂಜನಾದ್ರಿ ಸಿನಿ ಕ್ರಿಯೇಷನ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಗುರುಪ್ರಸಾದ್ ಎಂ ಜಿ ಛಾಯಾಗ್ರಹಣ, ಚಮಕ್, ಆಪರೇಷನ್ ಅಲಮೇಲಮ್ಮ ಚಿತ್ರಗಳಿಗೆ ಸಂಗೀತ ಒದಗಿಸಿದ್ದ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


