ಅಕ್ಟೋಬರ್ ನಲ್ಲಿ ಒಡೆಯ ಸಿನಿಮಾ ಸಾಂಗ್ ಶೂಟಿಂಗ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾವನ್ನು ಎಂಡಿ ಶ್ರೀಧರ್ ನಿರ್ದೇಶಿಸುತ್ತಿದ್ದು, ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾವನ್ನು ಎಂಡಿ ಶ್ರೀಧರ್ ನಿರ್ದೇಶಿಸುತ್ತಿದ್ದು, ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಒಡೆಯ ಸಿನಿಮಾ ಹಾಡಿನ ಶೂಟಿಂಗ್ ಗಾಗಿ ಸ್ವಿಟ್ಜರ್ ಲ್ಯಾಂಡ್ ಆರಿಸಿಕೊಳ್ಳಲಾಗಿದೆ, ಸ್ವಿಟ್ಜರ್ ಲ್ಯಾಂಡ್ ನಟ ದರ್ಶನ್ ಅವರ ಮೆಚ್ಚಿನ ಸ್ಥಳವಾಗಿದೆ.ಈ ಹಿಂದೆ ಬುಲ್ ಬುಲ್ ಮತ್ತು ಪೊರ್ಕಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ದರ್ಶನ್ ಹುಟ್ಟೂರು ಮೈಸೂರು. ಹಾಗಾಗಿ, ಮೈಸೂರು ದಸರಾಗೆ ದರ್ಶನ್ ಹೆಚ್ಚು ಬಾಂಧವ್ಯ ಹೊಂದಿದ್ದಾರೆ. ಇದೇ ಕಾರಣಕ್ಕೆ ದಸರಾಗೆ ‘ಒಡೆಯ’ನ ಟೀಸರ್ ರಿಲೀಸ್ ಮಾಡುವುದು ನಿರ್ದೇಶಕ ಎಂಡಿ ಶ್ರೀಧರ್ ಅವರ ಆಲೋಚನೆ. ಈಗಾಗಲೇ ಇದಕ್ಕೆ ಭರದ ಸಿದ್ಧತೆ ನಡೆಸುತ್ತಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಇದೇ ವೇಳೆ ‘ಒಡೆಯ’ ಸಿನಿಮಾದ ಟೀಸರ್ ತೆರೆಗೆ ಬರಲಿದೆ ಎನ್ನುವುದು ಮೂಲಗಳ ಮಾಹಿತಿ. ಈ ವಿಚಾರ ದರ್ಶನ್ ಅಭಿಮಾನಿಗಳ ಸಂತಸವನ್ನು ಹೆಚ್ಚಿಸಿದೆ. ಅಂದಹಾಗೆ ಈ ಬಗ್ಗೆ ಶೀಘ್ರವೇ ಚಿತ್ರತಂಡ ಅಧಿಕೃತ ಘೋಷಣೆ ಮಾಡಲಿದೆ.

ಗಾಂಧಿನಗರದ ಅಂಗಳದ ಮಾಹಿತಿ ಪ್ರಕಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ಗೆ ತೆರೆಗೆ ಬರುವ ಸಾಧ್ಯತೆ ಇದೆ. ಇದರ ಜೊತೆಗೆ ಸಿನಿಮಾ ರಿಲೀಸ್ ಡೇಟ್ ಬಗ್ಗೆಯೂ ಸಾಕಷ್ಟು ವಿಚಾರಗಳು ಹರಿದಾಡುತ್ತಿವೆ. ಗಾಂಧಿನಗರದ ಅಂಗಳದ ಮಾಹಿತಿ ಪ್ರಕಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ಗೆ ತೆರೆಗೆ ಬರುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.