ಸರ್ಕಾರಿ ಶಾಲೆ ದತ್ತು ಪಡೆದ 'ಡಿಬಾಸ್' ಫ್ಯಾನ್ಸ್-ಶಿಕ್ಷಣ ಸಚಿವರ ಅಭಿನಂದನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ’ಡಿ ಕಂಪನಿ’ ಹಾಸನ ಜಿಲ್ಲೆಯ ಕುಗ್ರಾಮದಲ್ಲಿರುವ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದಿದ್ದು, ಸಾರ್ವಜನಿಕರ ಪ್ರಶಂಸೆ ಹಾಗೂ ಶಿಕ್ಷಣ ಸಚಿವರು ಮೆಚ್ಚುಗೆಗೆ ಪಾತ್ರವಾಗಿದೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ’ಡಿ ಕಂಪನಿ’ ಹಾಸನ ಜಿಲ್ಲೆಯ ಕುಗ್ರಾಮದಲ್ಲಿರುವ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದಿದ್ದು, ಸಾರ್ವಜನಿಕರ ಪ್ರಶಂಸೆ ಹಾಗೂ ಶಿಕ್ಷಣ ಸಚಿವರು ಮೆಚ್ಚುಗೆಗೆ ಪಾತ್ರವಾಗಿದೆ
ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಸರ್ಕಾರಿ ಶಾಲೆಯನ್ನು ಎರಡು ವರ್ಷಗಳಿಗಾಗಿ ’ಡಿ ಕಂಪನಿ’ ದತ್ತು ಪಡೆದಿದ್ದು, ಅಭಿವೃದ್ಧಿಗೆ ಮುಂದಾಗಿದೆ.
ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಮೊದಲಾದ ವ್ಯವಸ್ಥೆಗಳನ್ನು ಡಿ ಕಂಪನಿ ಒದಗಿಸಲು ಮುಂದಾಗಿದೆ. ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚಲು ನಿರ್ಧರಿಸಿದೆ.
ದರ್ಶನ್ ಅಭಿಮಾನಿಗಳ ಈ ಕಾರ್ಯವನ್ನು ರಾಮೇನಹಳ್ಳಿಯ ನಿವಾಸಿಗಳು, ಶಾಲಾ ಮಕ್ಕಳ ಪೋಷಕರು ಶ್ಲಾಘಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್, ಅನುಕರಣೀಯ ಕಾರ್ಯ ಮಾಡಿರುವ ದರ್ಶನ್ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


