ಪೈಲ್ವಾನ್ ನಿರ್ದೇಶಕನೊಂದಿಗೆ ಕೈ ಜೋಡಿಸಿದ ನಿಖಿಲ್ ಕುಮಾರಸ್ವಾಮಿ!
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಇದೀಗ ಚಿತ್ರರಂಗದತ್ತ ಮುಖ ಮಾಡಿದ್ದು ಪೈಲ್ವಾನ್ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಇದೀಗ ಚಿತ್ರರಂಗದತ್ತ ಮುಖ ಮಾಡಿದ್ದು ಪೈಲ್ವಾನ್ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ.
ಜಾಗ್ವರ್ ಮತ್ತು ಸೀತಾರಾಮ ಕಲ್ಯಾಣ ಚಿತ್ರಗಳ ನಂತರ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಇನ್ನು ಗಜಕೇಸರಿ, ಹೆಬ್ಬುಲಿ ಮತ್ತು ಪೈಲ್ವಾನ್ ಚಿತ್ರಗಳ ಮೂಲಕ ಹ್ಯಾಟ್ರಿಕ್ ಚಿತ್ರಗಳನ್ನು ನೀಡಿರುವ ಎಸ್. ಕೃಷ್ಣ ಅವರು ಇದೀಗ ಮುಂದಿನ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿನಯಿಸಲಿದ್ದಾರೆ.
ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ 2.0 ಚಿತ್ರವನ್ನು ನಿರ್ಮಿಸಿದ್ದ ಲೈಕಾ ಪ್ರೊಡೆಕ್ಷನ್ ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ 2020ರ ಜನವರಿಯಿಂದ ಚಿತ್ರದ ಚಿತ್ರೀಕರಣ ನಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


