ಧ್ರುವ ಸರ್ಜಾರ 'ಪೊಗರು'ಗೆ ಬಂದ ನಟಿ ಮಯೂರಿ
ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ ಪೊಗರು ಚಿತ್ರದಲ್ಲಿ ಈಗಾಗಲೇ ರಶ್ಮಿಕಾ ಮಂದಣ್ಣ ...

Published On :
ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ ಪೊಗರು ಚಿತ್ರದಲ್ಲಿ ಈಗಾಗಲೇ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ನಂದ ಕಿಶೋರ್ ನಿರ್ದೇಶನದ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್, ಜಗಪತಿ ಬಾಬು ಮತ್ತು ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಇದೀಗ ಚಿತ್ರತಂಡಕ್ಕೆ ಮತ್ತೊಬ್ಬ ನಾಯಕಿಯ ಆಗಮನವಾಗಿದೆ. ಮಯೂರಿ ಪೊಗರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದಷ್ಟೆ ಬಹಿರಂಗವಾಗಿದೆ. 25 ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗಿಯಾಗಲಿರುವ ಮಯೂರಿ ತಮ್ಮ ಆಟಕ್ಕುಂಟು ಲೆಕ್ಕಕ್ಕಿಲ್ಲ, ನನ್ನ ಪ್ರಕಾರ ಮತ್ತು ರುಸ್ತುಮ್ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ನಂತರ ಪೊಗರು ಚಿತ್ರತಂಡ ಸೇರಲಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


