ಕನ್ನಡ ಸಿನಿಪ್ರೇಕ್ಷಕರಿಗೆ ಕನ್ನಡದಲ್ಲೇ ಮನವಿ ಮಾಡಿದ ಕಣ್ಸನ್ನೆ ಬೆಡಗಿ!
ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡಿಗರ ಮನದಣಿಸಲು ಸಜ್ಜಾಗಿದ್ದಾರೆ. 'ಒರು ಅಡಾರ್ ಲವ್' ಚಿತ್ರದ ಮೂಲಕ ದಿನ ಬೆಳಗಾಗುವುದರೊಳಗೆ ರಾಷ್ಟ್ರಮಟ್ಟದಲ್ಲಿ ಖ್ಯಾತರಾಗಿದ್ದ ನಟಿ ಇದೀಗ "ವಿಷ್ಣು ಪ್ರಿಯಾ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಧಿಕೃತ ಪ್ರವೇಶ ಮಾಡುತ್ತಿದ್ದಾರೆ.

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡಿಗರ ಮನದಣಿಸಲು ಸಜ್ಜಾಗಿದ್ದಾರೆ. 'ಒರು ಅಡಾರ್ ಲವ್' ಚಿತ್ರದ ಮೂಲಕ ದಿನ ಬೆಳಗಾಗುವುದರೊಳಗೆ ರಾಷ್ಟ್ರಮಟ್ಟದಲ್ಲಿ ಖ್ಯಾತರಾಗಿದ್ದ ನಟಿ ಇದೀಗ "ವಿಷ್ಣು ಪ್ರಿಯಾ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಧಿಕೃತ ಪ್ರವೇಶ ಮಾಡುತ್ತಿದ್ದಾರೆ.

"ವಿಷ್ಣು ಪ್ರಿಯಾ" ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇದೇ ಏಪ್ರಿಲ್ 5ಕ್ಕೆ ಬಿಡುಗಡೆಯಾಗಲಿದ್ದು ಈ ಬಗೆಗೆ ಪ್ರಿಯಾ ವಾರಿಯರ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ವಿಶೇಷವೆಂದರೆ ನಟಿ ಪ್ರಿಯಾ ವಾರಿಯರ್ ತಾವು ಕನ್ನಡದಲ್ಲೇ ಪೋಸ್ಟ್ ಹಾಕಿದ್ದಾರೆ.

"ಪ್ರೀತಿಯ ಅಭಿಮಾನಿಗಳಿಗೆ ಪ್ರಿಯ ಮಾಡುವ ನಮಸ್ಕಾರಗಳು. ನನ್ನ ಮೊದಲನೇ ಕನ್ನಡದ ಸಿನಿಮಾ " ವಿಷ್ಣು ಪ್ರಿಯ" ದ ಫಸ್ಟ್ ಲುಕ್ ಏಪ್ರಿಲ್ 5 ಕ್ಕೆ ಬಿಡುಗಡೆ ಆಗಲಿದೆ, ಎಲ್ಲರೂ ದಯವಿಟ್ಟು ಶೇರ್ ಮಾಡಿ ಹಾಗೂ ಸಪೋರ್ಟ್ ಮಾಡಿ....ನಿಮ್ಮೆಲ್ಲರ ಪ್ರೀತಿ ಹಾಗೂ ಆಶೀರ್ವಾದ ಸದಾ ನನ್ನ ಮೇಲೆ ಮತ್ತು ನಮ್ಮ ಸಿನಿಮಾ ತಂಡದ ಮೇಲೆ ಇರಲಿ .." ನಟಿ ಹೇಳಿದ್ದಾರೆ.

"ವಿಶ್ಣು ಪ್ರಿಯಾ" ಚಿತ್ರವನ್ನು ಕೆ. ಮಂಜು ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕ ವಿಕೆ ಪ್ರಕಾಶ್ ನಿರ್ದೇಶಿಸುತ್ತಿದ್ದಾರೆ."ಪಡ್ಡೆಹುಲಿ" ಚಿತ್ರದ ಶ್ರೇಯಸ್ ಚಿತ್ರದಲ್ಲಿ ನಾಯಕ ಪಾತ್ರಧಾರಿಯಾಗಿರುವುದು ಸ್ಯಾಂಡಲ್ ವುಡ್ ನಲ್ಲಿ ಪ್ರಿಯಾ ಅವರಿಗೆ ಈ ಚಿತ್ರ ಎಷ್ಟರಮಟ್ಟಿಗೆ ಜನಪ್ರಿಯತೆ ತಂದುಕೊಡಲಿದೆ ಎಂದು ಕಾದು ನೋಡಬೇಕಿದೆ.


Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


