ಕೊರೋನಾದಿಂದ ಮುಕ್ತರಾದ ಗಾಯಕಿ ಕನಿಕಾ ಕಪೂರ್?
ಕೊರೋನಾ ವೈರಸ್ ನಿಂದಾಗಿ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಅವರಿಗೆ 6ನೇ ಬಾರಿ ವೈರಸ್ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ವೈರಸ್ ಇಲ್ಲ ಎಂದು ತಿಳಿದುಬಂದಿದೆ.

ಲಖನೌ: ಕೊರೋನಾ ವೈರಸ್ ನಿಂದಾಗಿ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಅವರಿಗೆ 6ನೇ ಬಾರಿ ವೈರಸ್ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ವೈರಸ್ ಇಲ್ಲ ಎಂದು ತಿಳಿದುಬಂದಿದೆ.
ಕಳೆದ 5 ಬಾರಿಯ ಪರೀಕ್ಷೆಯಲ್ಲೂ ಕನಿಕಾ ಅವರಲ್ಲಿ ವೈರಸ್ ದೃಢಪಟ್ಟಿತ್ತು. ಆದರೆ, ಇದೀಗ 6ನೇ ಬಾರಿಯ ಪರೀಕ್ಷೆಯಲಲಿ ವೈರಸ್ ಇಲ್ಲ ಎಂದು ಹೇಳಲಾಗುತ್ತಿದೆ.
ವೈರಸ್ ಇಲ್ಲದೇ ಹೋದರೂ, ಮತ್ತೊಂದು ಪರೀಕ್ಷೆಯಲ್ಲಿ ವೈರಸ್ ಇಲ್ಲ ಎಂದು ಬರುವವರೆಗೂ ಕನಿಕಾ ಅವರು ಆಸ್ಪತ್ರೆಯಲ್ಲಿಯೇ ಇರಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಕನಿಕಾ ಅವರನ್ನು ಪ್ರತೀ 48 ಗಂಟೆಗಳಿಗೊಮ್ಮೆ ಪರೀಕ್ಷೆಗೊಳಪಡಿಸಲಾಗುತ್ತಿದೆ.
ಕನಿಕಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಂತೆ ಪಡುವಂತಹ ಯಾವುದೇ ಅನಿವಾರ್ಯತೆಯಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


