ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ
ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ಈವರೀಗೆ ಸುಮಾರು ಮುನ್ನೂರಕ್ಕೂ ಹೆಚ್ಚಿನ ಚಿತ್ರದಲ್ಲಿ ಅಭಿನಯಿಸಿರುವ ಬುಲೆಟ್ ಪ್ರಕಾಶ್ ತಮ್ಮ ಕಾಮಿಡಿ ಪಾತ್ರಗಳಿಂಡ ಪ್ರೇಕ್ಷಕರ ಮನಗೆದ್ದಿದ್ದರು.

ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1976ರಲ್ಲಿ ಏ.2ರಂದು ಬೆಂಗಳೂರಿನ ಬಡ ಕುಟುಂಬದಲ್ಲಿ ಪ್ರಕಾಶ್ ಅವರು ಜನಿಸಿದ್ದರು.
44 ವರ್ಷದ ಬುಲೆಟ್ ಪ್ರಕಾಶ್ ಅವರು ಬಹುಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ಐದು ದಿನಗಳಿಂದ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯ ಡಾ. ತೇಜಸ್ವಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. "ಗ್ಯಾಸ್ಟಿಕ್ ಸಮಸ್ಯೆಯ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಅವರಿಗೆ ಲಿವರ್ ಹಾಗೂ ಕಿಡ್ನಿ ಸಮಸ್ಯೆ ಕಾಣಿಸಿದ್ದು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದ್ದವು.
ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದು ಕಲಾಸಿ ಪಾಳ್ಯ, 'ಜಾಕಿ', 'ಬೊಂಬಾಯಿ ಮಿಠಾಯಿ', 'ಭೀಷ್ಮ', 'ಮಸ್ತ್ ಮಜಾ ಮಾಡಿ' ಸೇರಿದಂತೆ 325 ಚಿತ್ರಗಳಲ್ಲಿ ನಟಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ದರ್ಶನ್, ಶಿವರಾಜ್‌ಕುಮಾರ್, ಉಪೇಂದ್ರ, ಸುದೀಪ್ ಮುಂತಾದ ಸಿನಿ ನಟರ ಜೊತೆ ಬುಲೆಟ್ ಪ್ರಕಾಶ್ ಅಭಿನಯಿಸಿದ್ದಾರೆ.
ಪ್ರಕಾಶ್ ಅವರ ನಿಧನಕ್ಕೆ ಚಿತ್ರರಂಗ ಸೇರಿದಂತೆ ವಿವಿಧ ರಂಗಗಳ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


