ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
ಸ್ಯಾಂಡಲ್ ವುಡ್ ಪ್ರಖ್ಯಾತ ಹಾಸ್ಯ ನಟ ಬಿಲೆಟ್ ಪ್ರಕಾಶ್ ಅನಾರೋಗ್ಯಕ್ಕೀಡಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಸ್ಯಾಂಡಲ್ ವುಡ್ ಪ್ರಖ್ಯಾತ ಹಾಸ್ಯ ನಟ ಬಿಲೆಟ್ ಪ್ರಕಾಶ್ ಅನಾರೋಗ್ಯಕ್ಕೀಡಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ನಟ ಬುಲೆಟ್ ಪ್ರಕಾಶ್ ಅವರನ್ನು ವೆಂಟಿಲೇಟರ್ ನಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಆರೋಗ್ಯ ಸಮಸ್ಯೆಯಿಂದಾಗಿ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಧ್ಯ ರು. ಆದರೆ ಅವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಐದು ದಿನಗಳಿಂದ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯ ಡಾ. ತೇಜಸ್ವಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. "ಗ್ಯಾಸ್ಟಿಕ್ ಸಮಸ್ಯೆಯ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ಅವರಿಗೆ ಲಿವರ್ ಹಾಗೂ ಕ್ಡ್ನಿ ಸಮಸ್ಯೆ ಕಾಣಿಸಿದ್ದು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದಾರೆ" ಎಂದು ಆಸ್ಪತ್ರೆಯಮೂಲಗಳು ಹೇಳಿದೆ.
ಇನ್ನೊಂದೆಡೆ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮಾದ್ಯಮದೊಂದಿಗೆ ಮಾತನಾಡಿ "ಅಪ್ಪ ಚೆನ್ನಾಗಿದ್ದಾರೆ, ಗ್ಯಾಸ್ಟಿಕ್ ಸಮಸ್ಯೆಯಾಗಿತ್ತು ಈಗ ಆರೋಗ್ಯ ಸ್ಥಿರವಾಗಿದೆ" ಎಂದಿದ್ದಾರೆ.
ನಲವತ್ತೆರಡು ವರ್ಷದ ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ.ಈವರೀಗೆ ಸುಮಾರು ಮುನ್ನೂರಕ್ಕೂ ಹೆಚ್ಚಿನ ಚಿತ್ರದಲ್ಲಿ ಅಭಿನಯಿಸಿರುವಬುಲೆಟ್ ಪ್ರಕಾಶ್ ತಮ್ಮ ಕಾಮಿಡಿ ಪಾತ್ರಗಳಿಂಡ ಪ್ರೇಕ್ಷಕರಮನಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


