ಖ್ಯಾತ ಚಿತ್ರ ಸಾಹಿತಿ ಚಿ. ಉದಯಶಂಕರ್ ಪತ್ನಿ ವಿಧಿವಶ
ಕನ್ನಡ ಚಿತ್ರರಂಗದ ಮಹಾನ್ ಚಿತ್ರ ಸಾಹಿತಿ ದಿವಂಗತ ಚಿ. ಉದಯಶಂಕರ್ ಅವರ ಪತ್ನಿ ಶಾರದಮ್ಮ (74) ಗುರುವಾರ ನಿಧನರಾಗಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ಚಿತ್ರ ಸಾಹಿತಿ ದಿವಂಗತ ಚಿ. ಉದಯಶಂಕರ್ ಅವರ ಪತ್ನಿ ಶಾರದಮ್ಮ (74) ಗುರುವಾರ ನಿಧನರಾಗಿದ್ದಾರೆ.
ಬೆಂಗಳೂರಿನ ಯಶವಂತಪುರದ ಇಸ್ಕಾನ್ ದೇವಸ್ಥಾನ ಸಮೀಪದ ಅಪಾರ್ಟ್ಮೆಂಟ್ ಒಂದರಲ್ಲಿ ಮಗ ಚಿ. ಗುರುದತ್ ಅವರೊಂದಿಗೆ ವಾಸಿಸುತ್ತಿದ್ದ ಅವರು. ನಸುಕಿನ 3.30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. 1964ಜೂನ್ 5ರಂದು ಶಾರದಮ್ಮ ಹಾಗೂ ಚಿ. ಉದಯಶಂಕರ್ ವಿವಾಹವಾಗಿದ್ದರು. ಪತಿ ಚಿ. ಉದಯಶಂಕರ್ 1993ರಲ್ಲಿ ಮೃತಪಟ್ಟಿದ್ದರು. ಮೂವರು ಮಕ್ಕಳ ಪೈಕಿ ಹಿರಿಯ ಪುತ್ರ ರವಿಶಂಕರ್ ಕೂಡ ಕೆಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದರು.
ಚಿ, ಗುರುದತ್ ಬೆಂಗಳೂರಿನಲ್ಲಿ ನೆಲೆಸಿದ್ದರೆ ಪುತ್ರಿ ಶ್ಯಾಮಲಾ ಅಮೆರಿಕಾದಲ್ಲಿದ್ದಾರೆ.
ಮೃತ ಶಾರದಮ್ಮನವರ ಅಂತ್ಯ ಸಂಸ್ಕಾರ ಹರಿಶ್ಚಂದ್ರ ಘಾಟ್ ನಲ್ಲಿ ಇಂದು ಮಧ್ಯಾಹ್ನ ನೆರವೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


