ಸಿನಿಮಾ ಸುದ್ದಿ

ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ!

ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ

ಮುಂಬಯಿ: ಮತ್ತೊಬ್ಬ ಕಿರುತೆರೆ ನಟ ಸಮೀರ್ ಶರ್ಮ ಶವವಾಗಿ ಪತ್ತೆ!
ಸಮೀರ್ ಶರ್ಮಾ
Published On :

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. 

ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, ","ಕಹಾನಿ ಘರ್ ಘರ್ ಕಿ "ಮತ್ತು" "ಯೆ ರಿಶ್ತೆ ಹೈ ಪ್ಯಾರ್ ಕೆ" ಮೊದಲಾದ ಧಾರಾವಾಹಿಗಳಲ್ಲಿ ಪಾತ್ರಗಳಿಂದ ಅವರು ಜನಪ್ರಿಯತೆ ಗಳಿಸಿದ್ದರು. 

ಶರ್ಮಾ ಸೀಲಿಂಗ್ ಫ್ಯಾನ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಸ್ಥಳಕ್ಕೆ ಬಂದ ಪೊಲೀಸರಿಗೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಮಲಾಡ್ ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.