'ವಿಕ್ರಾಂತ್ ರೋಣಾ' ಗತ್ತು, ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗಮ್ಮತ್ತು!
‘ಫ್ಯಾಂಟಮ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸೋಮವಾರ ಭಲೇ ಗಮ್ಮತ್ತು ಸಿಕ್ಕಿದೆ.

ಬೆಂಗಳೂರು: ‘ಫ್ಯಾಂಟಮ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸೋಮವಾರ ಭಲೇ ಗಮ್ಮತ್ತು ಸಿಕ್ಕಿದೆ.
ನಿರ್ದೇಶಕ ಅನೂಪ್ ಭಂಡಾರಿ ಅಭಿಮಾನಿಗಳಿಗೆ ನೀಡಿದ್ದ ಭರವಸೆ ಈಡೇರಿಸಿದ್ದು, ಆಗಸ್ಟ್ 10 ರಂದು ಸರಿಯಾಗಿ 10 ಗಂಟೆಗೆ ಕಿಚ್ಚ ಸುದೀಪ್ ಅವರ ವಿಕ್ರಾಂತ್ ರೋಣಾ ಪಾತ್ರದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆಗೊಳಿಸಿದ್ದಾರೆ.
ಪೋಸ್ಟರ್ ಕಂಡ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಲೆ ಬುರುಡೆ ಆಕಾರದಲ್ಲಿ ಇರುವ ಸಿಂಹಾಸನದ ಮೇಲೆ ಕುಳಿತಿರುವ ಸುದೀಪ್ ಅವರು ಗನ್ ಹಿಡಿದು ಖಡಕ್ ಪೋಸ್ ನೀಡಿದ್ದಾರೆ.
ಇದರ ಜೊತೆಗೆ ವಿಕ್ರಾಂತ್ ರೋಣಾ ಪಾತ್ರದ ಬಗ್ಗೆಯೂ ನಿರ್ದೇಶಕ ಅನೂಪ್ ಭಂಡಾರಿ ಕಿರು ಪರಿಚಯ ಮಾಡಿಕೊಟ್ಟಿದ್ದಾರೆ. ಅದಕ್ಕಾಗಿಯೇ ಒಂದು ವಿಡಿಯೋ ಹಂಚಿಕೊಂಡಿಕೊಂಡಿರುವ ಅವರು, 'ಫ್ಯಾಂಟಮ್ ಚಿತ್ರದ ಮುಖ್ಯ ಪಾತ್ರ ವಿಕ್ರಾಂತ್ ರೋಣಾ. ಆ ಹೆಸರಿನಲ್ಲಿ ಎಷ್ಟು ಪವರ್ ಇದೆಯೋ ಆ ಪಾತ್ರ ಕೂಡ ಅಷ್ಟೇ ಪವರ್‌ಫುಲ್. ಅವನು ಏನ್ ಮಾಡ್ತಾನೆ, ಯಾಕೆ ಮಾಡ್ತಾನೆ, ಹೇಗೆ ಮಾಡ್ತಾನೆ ಅನ್ನೋದು ಯಾರಿಗೂ ಅರ್ಥ ಆಗೋದೇ ಇಲ್ಲ. ಆದರೆ ಅವನು ಏನೇ ಮಾಡಿದರೂ ಅದಕ್ಕೊಂದು ಕಾರಣ ಇರುತ್ತೆ' ಎಂದಿದ್ದಾರೆ.
ಕೊರೋನಾ ನಿಯಮಾವಳಿಗಳನ್ನು ಅಳವಡಿಸಿಕೊಂಡು, ಫ್ಯಾಂಟಮ್ ಸಿನಿಮಾದ ಚಿತ್ರೀಕರಣದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ವಿಲಿಯಂ ಡೇವಿಡ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


