'ಯುವರತ್ನ'ನ ನಾಯಕಿ ಸಾಯೇಷಾ ಸೈಗಲ್ ಲುಕ್ ರಿವೀಲ್!
ಪುನೀತ್ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಚಿತ್ರ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಯಾಗಿದೆ.

ಪುನೀತ್ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಚಿತ್ರ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಯಾಗಿದೆ.
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಲುಕ್ ನ್ನು ಬಹಿರಂಗಪಡಿಸಿದ್ದ ಚಿತ್ರತಂಡ ನಾಯಕಿಯ ಒಂದು ಲುಕ್ ನ್ನು ಸಹ ತೋರಿಸಿರಲಿಲ್ಲ ಮತ್ತು ಎಲ್ಲಿಯೂ ಬಹಿರಂಗಪಡಿಸಿರಲಿಲ್ಲ. ಇದೀಗ ಆ ಕಾಯುವಿಕೆಗೆ ಬ್ರೇಕ್ ಬಿದ್ದಿದೆ. ಚಿತ್ರದ ನಾಯಕಿ ಸಾಯೇಷಾ ಸೈಗಲ್ ಫಸ್ಟ್ ಲುಕ್ ರಿಲೀಸ್ ಮಾಡಿದೆ ಯುವರತ್ನ ತಂಡ.
ಅಂದಹಾಗೆ, ಇಂದು ನಟಿ ಸಾಯೇಷಾ ಸೈಗಲ್ ಜನ್ಮದಿನ. ಆ ಪ್ರಯುಕ್ತ ಅವರ ಲುಕ್ ಬಿಡುಗಡೆ ಮಾಡಿ ಜನ್ಮದಿನಕ್ಕೆ ಶುಭಕೋರಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ರಾಮ್. ಮುಂಬೈ ಮೂಲದ ಸಾಯೇಷಾ, ಬಾಲಿವುಡ್ ಸೇರಿ ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ‘ಯುವರತ್ನ’ ಮೂಲಕ ಕನ್ನಡಕ್ಕೆ ಆಗಮಿಸಿದ್ದಾರೆ.
ಯುವರತ್ನ ಚಿತ್ರದಲ್ಲಿ ನಾಯಕಿ ಸಾಯೇಷಾ ಹೆಸರು ವಂದನಾ ಎಂದು, ಚಿತ್ರದ ತಾರಾಗಣದಲ್ಲಿ ದಿಗಂತ್, ಧನಂಜಯ್, ಸೋನು ಗೌಡ ಸೇರಿ ಹಲವು ಕಲಾವಿದರಿದ್ದು, ಹೊಂಬಾಳೆ ಫಿಲಂಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


