ನಟ ಶಶಿಕುಮಾರ್ ಪುತ್ರ'ನ ಸೀತಾಯಣ ಚಿತ್ರ ಬಿಡುಗಡೆಗೆ ಸಿದ್ಧ!
ಕನ್ನಡ ಚಿತ್ರರಂಗದ ಸ್ಫುರದ್ರೂಪಿ ನಟ ಎಂದೇ ಗುರುತಿಸಿಕೊಂಡಿರುವ ಶಶಿಕುಮಾರ್ ಅವರ ಪುತ್ರ ಅಕ್ಷಿತ್ ನಾಯಕನಾಗಿ ನಟಿಸಿರುವ ಸೀತಾಯಣ ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ.

ಕನ್ನಡ ಚಿತ್ರರಂಗದ ಸ್ಫುರದ್ರೂಪಿ ನಟ ಎಂದೇ ಗುರುತಿಸಿಕೊಂಡಿರುವ ಶಶಿಕುಮಾರ್ ಅವರ ಪುತ್ರ ಅಕ್ಷಿತ್ ನಾಯಕನಾಗಿ ನಟಿಸಿರುವ ಸೀತಾಯಣ ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ.
ಸೀತಾಯಣ ಚಿತ್ರದ ಮೂಲಕ ಅಕ್ಷಿತ್ ಶಶಿಕುಮಾರ್ ಅವರು ದ್ವಿಭಾಷಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಸೀತಾಯಣ ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲೂ ಬಿಡುಗಡೆಗೊಳ್ಳಲು ಸಿದ್ಧಗೊಂಡಿದೆ. ತಮಿಳಿನಲ್ಲೂ ಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿದ್ದು, ಚಿತ್ರದ ಡಬ್ಬಿಂಗ್ ಪ್ರಗತಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹತದಲ್ಲಿದೆ. ಶೀಘ್ರದಲ್ಲಿಯೇ ಚಿತ್ರದ ತಂಡ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ನೀಡಲಿದ್ದು, ಚಿತ್ರದ ಪ್ರಚಾರ ಕಾರ್ಯಕ್ಕೆ ನಿರ್ದೇಶಕ ಪ್ರಭಾಕರ್ ಆರಿಪಕ್ ಅವರು ತುದಿಗಾಲಲ್ಲಿ ನಿಂತಿದ್ದಾರೆ.
‘ಸೀತಾಯಣ’ಲ್ಲಿ ಲಖನೌ ಮೂಲದ ಮಾಡೆಲಿಂಗ್ ಬೆಡಗಿ ಅನ್ ಹಿತ್ ಭೂಷಣ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿಗೂ ಅವರೇ ನಾಯಕಿ. ಹೈದರಾಬಾದ್ ಮೂಲದ ಕಲರ್ ಕ್ಲೌಡ್ಸ್ ಎಂಟರ್ ಟೈನ್ ಮೆಂಟ್ ಬ್ಯಾನರ್ ನಲ್ಲಿ ರೋಹನ್ ಭಾರದ್ವಜ್ ಈ ಚಿತ್ರ ನಿರ್ಮಿಸಿದ್ದರೆ. ಪ್ರಭಾಕರ್ ಆರಿಪಿಕ್ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


