ಸಿನಿಮಾ ಸುದ್ದಿ

ಡಾಲಿ ಧನಂಜಯ್ ರ ಮಾಜಿ ಡಾನ್ ಎಂ.ಪಿ. ಜಯರಾಜ್ ಪಾತ್ರದ ಚಿತ್ರದ ಶೀರ್ಷಿಕೆ 'ಹೆಡ್ ಬುಷ್'

ಅಗ್ನಿ ಶ್ರೀಧರ್ ರವರ ‘ದಾದಾಗಿರಿಯ ದಿನಗಳು’ ಕಾದಂಬರಿ ಆಧಾರಿತ ಸಿನಿಮಾ ಬರುತ್ತಿದೆ. ಚಿತ್ರಕ್ಕೆ ಡಾಲಿ ಧನಂಜಯ ನಾಯಕನಾಗಿ ಡಾನ್​ ಜಯರಾಜನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಇಂದು ಬಿಡುಗಡೆಯಾಗಿದ್ದು, ಹೆಡ್ ಬುಷ್ ಎಂದು ಇಡಲಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ಸಿದ್ಧವಾಗಲಿದೆ.

ಡಾಲಿ ಧನಂಜಯ್ ರ ಮಾಜಿ ಡಾನ್ ಎಂ.ಪಿ. ಜಯರಾಜ್ ಪಾತ್ರದ ಚಿತ್ರದ ಶೀರ್ಷಿಕೆ 'ಹೆಡ್ ಬುಷ್'
ಹೆಡ್ ಬುಷ್ ಟೈಟಲ್
Published On :

ಅಗ್ನಿ ಶ್ರೀಧರ್ ರವರ ‘ದಾದಾಗಿರಿಯ ದಿನಗಳು’ ಕಾದಂಬರಿ ಆಧಾರಿತ ಸಿನಿಮಾ ಬರುತ್ತಿದೆ. ಚಿತ್ರಕ್ಕೆ ಡಾಲಿ ಧನಂಜಯ ನಾಯಕನಾಗಿ ಡಾನ್​ ಜಯರಾಜನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಇಂದು ಬಿಡುಗಡೆಯಾಗಿದ್ದು, ಹೆಡ್ ಬುಷ್ ಎಂದು ಇಡಲಾಗಿದೆ.  ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ಸಿದ್ಧವಾಗಲಿದೆ.

ಅಶು ಬೆದ್ರ ನಿರ್ಮಾಣ ಮಾಡುತ್ತಿರುವ ಚಿತ್ರದ ಪೋಸ್ಟರ್​ ನ್ನು ಪವರ್​ಸ್ಟಾರ್ ಪುನೀತ್​ ರಾಜ್​ಕುಮಾರ್​ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಬೆಂಗಳೂರಿನ ಮಾಜಿ ಡಾನ್​ ಎಂ.ಪಿ. ಜಯರಾಜ್​ ಅವರ ಕುರಿತಾದ ಚಿತ್ರವಿದು. ಕೋವಿಡ್-19 ಇಲ್ಲದಿದ್ದರೆ ಚಿತ್ರದ ಶೂಟಿಂಗ್ ಪ್ರಾರಂಭವಾಗಬೇಕಿತ್ತು. ಆದರೆ, ಲಾಕ್​ಡೌನ್​ನಿಂದ ಪ್ರಾರಂಭವಾಗಲಿಲ್ಲ. ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ಒಂದು ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರಕ್ಕೆ ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಸಂಭಾಷಣೆ ಬರೆಯುತ್ತಿದ್ದಾರೆ. 80ರ ದಶಕದಲ್ಲಿ ಬೆಂಗಳೂರಿನ ಅಂಡರ್​ವರ್ಲ್ಡ್​ಲ್ಲಿ ನಡೆದ ಕೆಲವು ನೈಜ ಘಟನೆಗಳನ್ನು ಇಟ್ಟುಕೊಂಡು ಚಿತ್ರ ತಯಾರಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.