'ಫ್ಯಾಂಟಮ್ 'ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನೀತಾ ಅಶೋಕ್
ನೀತಾ ಅಶೋಕ್ ಎಂಬ ಮತ್ತೊಬ್ಬ ಕಿರುತೆರೆ ನಟಿ ಬೆಳ್ಳಿತೆರೆ ಮೇಲೆ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ಯಶೋಧೆ, ನಾ ನಿನ್ನ ಬಿಡಲಾರೆ, ನೀಲಾಂಬರಿ ಮೊದಲಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನೀತಾ ಅಶೋಕ್ ಇದೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ನೀತಾ ಅಶೋಕ್ ಎಂಬ ಮತ್ತೊಬ್ಬ ಕಿರುತೆರೆ ನಟಿ ಬೆಳ್ಳಿತೆರೆ ಮೇಲೆ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ಯಶೋಧೆ, ನಾ ನಿನ್ನ ಬಿಡಲಾರೆ, ನೀಲಾಂಬರಿ ಮೊದಲಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನೀತಾ ಅಶೋಕ್ ಇದೀಗ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.
ಚಿತ್ರದಲ್ಲಿ ನೀತಾ ಅಶೋಕ್ ದ್ದು ಅಪರ್ಣಾ ಬಲ್ಲಾಳ್ ಎಂಬ ಪಾತ್ರವಾಗಿದ್ದು ಪ್ರೀತಿಯಿಂದ ಪನ್ನ ಎಂದು ಕರೆಯುತ್ತಾರೆ. ಸಂಜೀವ್ ಗಂಭೀರ್ ಪಾತ್ರ ಮಾಡುತ್ತಿರುವ ನಿರೂಪ್ ಭಂಡಾರಿಗೆ ಜೊತೆಯ ಪಾತ್ರ. ಚಿತ್ರದಲ್ಲಿ ಸಾಹಸ, ಸಾಧನೆ ಮಾಡುವ ಹುಡುಗಿ ಪಾತ್ರ.
ಇಂದು ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ. ಚಿತ್ರೀಕರಣ ಭರದಿಂದ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೊದಲ್ಲಿ ಸಾಗುತ್ತಿದೆ. ಈಗಾಗಲೇ ಶೇಕಡಾ 40ರಷ್ಟು ಚಿತ್ರೀಕರಣ ಮುಗಿದಿದೆ.
ಅನೂಪ್ ಭಂಡಾರಿ ನಿರ್ದೇಶನದ ಶಾಲಿನಿ ಆರ್ಟ್ಸ್ ನಡಿ ಮಂಜುನಾಥ್ ಗೌಡ ನಿರ್ಮಾಣ ಮಾಡುತ್ತಿದ್ದು ಅಜನೀಶ್ ಲೋಕನಾಥ್ ಸಂಗೀತ, ವಿಲಿಯಮ್ ಡೇವಿಡ್ ಛಾಯಾಗ್ರಹಣ, ಶಿವಕುಮಾರ್ ಕಲಾ ನಿರ್ದೇಶನವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


