ಭಜರಂಗಿ 2 ಮೂಲಕ ಯೋಗಿ ಬಾಬು ಕನ್ನಡಕ್ಕೆ ಪಾದಾರ್ಪಣೆ?
ಒಟಿಟಿಯಲ್ಲಿ ಬಿಡುಗಡೆಯಾಗಿದ್ದ ಕಾಕ್ ಟೇಲ್ ಸಿನೆಮಾದಲ್ಲಿ ಕಾಣಿಸಿಕೊಂಡ ಯೋಗಿ ಬಾಬು ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿದ್ದಾರೆ. ಅವರು ಪುನೀತ್ ರಾಜ್ ಕುಮಾರ್, ದುನಿಯಾ ವಿಜಯ್, ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ ಚಿತ್ರಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.

ಒಟಿಟಿಯಲ್ಲಿ ಬಿಡುಗಡೆಯಾಗಿದ್ದ ಕಾಕ್ ಟೇಲ್ ಸಿನೆಮಾದಲ್ಲಿ ಕಾಣಿಸಿಕೊಂಡ ಯೋಗಿ ಬಾಬು ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿದ್ದಾರೆ. ಅವರು ಪುನೀತ್ ರಾಜ್ ಕುಮಾರ್, ದುನಿಯಾ ವಿಜಯ್, ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ ಚಿತ್ರಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.
ನಟ ಯೋಗಿ ಬಾಬು ಕನ್ನಡದಲ್ಲಿ ಎ ಹರ್ಷ ಅವರ ಭಜರಂಗಿ 2 ಚಿತ್ರದ ಮೂಲಕ ಅಭಿನಯಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಚಿತ್ರದ ಕೊನೆಯ ಭಾಗದ ಶೂಟಿಂಗ್ ನಡೆಯುತ್ತಿದ್ದು ಕಳೆದ ಆಗಸ್ಟ್ 12ರಂದು ಶೂಟಿಂಗ್ ಪ್ರಾರಂಭವಾಗಿದೆ.
ಯೋಗಿ ಬಾಬು ಚಿತ್ರೀಕರಣಕ್ಕಾಗಿ ಅಲಸೂರಿನಿಂದ ಮೋಹನ್ ಬಿ ಕೆರೆ ಸ್ಟುಡಿಯೊಕ್ಕೆ ಪ್ರತಿದಿನ ಪ್ರಯಾಣಿಸುತ್ತಿದ್ದಾರೆ.ಜಯಣ್ಣ ಫಿಲ್ಮ್ಸ್ ನಡಿ ತಯಾರಾಗುತ್ತಿರುವ ಭಜರಂಗಿ2 ಚಿತ್ರ ಶಿವರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರವಾಗಿದ್ದು ಭಾವನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರಲ್ಲಿ ಯೋಗಿ ಬಾಬುರವರ ಪಾತ್ರವೇನು ಎಂದು ಬಹಿರಂಗವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


