ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಅಡುಗೆ ಭಟ್ಟನ ವಿಚಾರಣೆ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.

ಮುಂಬಯಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.
ನಿನ್ನೆ ಸಿಬಿಐ ತಂಡ ಸಾಂತಾಕ್ರೂಜ್ ನಲ್ಲಿರುವ ಅತಿಥಿ ಗೃಹಕ್ಕೆ ಭಟ್ಟನನ್ನು ಕರೆತರಲಾಗಿತ್ತು, ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಬಾಂದ್ರಾ ಪೊಲೀಸ್ ಠಾಣೆಗೆ ಆಗಮಿಸಿದ್ದರು.
ಶುಕ್ರವಾರ ಇಬ್ಬರು ಮುಂಬಯಿ ಪೊಲೀಸರು ಸುಶಾಂತ್ ಮನೆಗೆ ಭೇಟಿ ನೀಡಿದ್ದರು. ನಾವು ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿರುವುದಾಗಿ ಮುಂಬಯಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ತಿಳಿಸಿದ್ದಾರೆ.
ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


