ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ: ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ: ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ
ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್
Published On :

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ.

ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಬಂದು ಮಾಹಿತಿ ವಿನಿಮಯ ಮಾಡಿಕೊಳ್ಳುವ ಮೂಲಕ ಬೆಂಗಳೂರು ಪೊಲೀಸರಿಗೆ ಬೆಂಬಲ ನೀಡಿ ಎಂದು ಸಿಸಿಬಿ ತಿಳಿಸಿದೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ಕನ್ನಡದಲ್ಲಿ ನನಗೆ ಗೊತ್ತಿರುವಂತಹ ನಟರು, ಸ್ಟಾರ್ ನಟರು ಯಾರು ಕೂಡ ಇಂಥದ್ದನ್ನು ಮಾಡಲ್ಲ. ಅಂತಹ ಉದಾಹರಣೆ ಇಲ್ಲ. ಆದರೆ, ಯುವ ನಟ-ನಟಿಯರು, ಇದ್ದಕ್ಕಿದ್ದಂತೆ  ಪ್ರಚಾರ ಗಳಿಸಿದವರು ಈ ಥರದ ರೇವ್‌ ಪಾರ್ಟಿಗಳಲ್ಲಿ ಸೇರುತ್ತಾರೆ ಎಂದು  ನಾನು ಕೂಡ ಕೇಳಿದ್ದೇನೆ. ನನಗೂ ಹಲವಾರು ಘಟನೆಗಳು ಗೊತ್ತಿವೆ. ನನಗೆ ಭದ್ರತೆ ನೀಡಿದರೆ, ಈ ಬಗ್ಗೆ ಹೇಳಬಹುದು. ಅದರಲ್ಲೂ ನಟಿಯರು ಹೆಚ್ಚಾಗಿ  ಇದರಲ್ಲಿ ಇದ್ದಾರೆ' ಎಂದು ಮಾಧ್ಯಮಗಳಿಗೆ ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.