ಶಂಭೋ ಶಿವ ಶಂಕರ: ಖಡಕ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಶಶಿ ಕುಮಾರ್
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.
ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶಶಿ ಕುಮಾರ್ ಅವರು ಕಾಣಿಸಿಕೊಳಲಿದ್ದು, ಚಿತ್ರದಲ್ಲಿ ಅವರದು ಮಹತ್ವದ ಪಾತ್ರ ಎನ್ನುತ್ತಾರೆ ನಿರ್ದೇಶಕರು.
ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9ರಿಂದ ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಶಶಿ ಕುಮಾರ್ ಸೇರಿದಂತೆ ಚಿತ್ರದಲ್ಲಿ ಅಭಿನಯಿಸುವ ಎಲ್ಲಾ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ನಿರ್ದೇಶಿಸಿದ್ದಾರೆ.
'ಶಂಭೋ ಶಿವ ಶಂಕರ' ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ.
ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ. ನಟರಾಜ್ ಮುದ್ದಾಲ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


